ರಾಯಚೂರು

ತೃಪ್ತಿ ತಂದ ಲಿಂಗಸ್ಗೂರಿನ ಸೇವೆ: ಪಿಎಸ್ಐ ಸಿದ್ದರಾಮಯ್ಯ

Published On :

ಲಿಂಗಸ್ಗೂರು: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಳೆದ ಸುಮಾರು ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿಎಸ್ಐ ಸಿದ್ದರಾಮಯ್ಯ ವರ್ಗಾವಣೆಗೊಂಡ ಕಾರಣ ಸೋಮವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ನಾಗರಿಕರಿಂದ ಪಿಎಸ್ಐ ಸಿದ್ದರಾಮಯ್ಯ ಸನ್ಮಾನ ಸ್ವೀಕರಿಸಿ ಮಾತನಾಡಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಸಾಮಾನ್ಯ ಸಂಗತಿ. ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿರುವುದು ನನಗೆ ತೃಪ್ತಿ ತಂದಿದ್ದು, ವರ್ಗಾವಣೆ ಆದೇಶ ಪಾಲನೆ ಮಾಡುವುದು ಪ್ರತಿಯೊಬ್ಬ ನೌಕರನ ಕರ್ತವ್ಯ. ಪಟ್ಟಣದ ನಾಗರಿಕರು ನನ್ನ ಸೇವಾವಧಿಯಲ್ಲಿ ಉತ್ತಮ ರೀತಿಯಲ್ಲಿ ಸಹಕಾರ ನೀಡಿದ್ದಾರೆಂದು ತಿಳಿಸಿದರು.
ಸಿಪಿಐ ಪಂಚಾಕ್ಷರಯ್ಯ ಮಾತನಾಡಿ, ಸರ್ಕಾರದ ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಷ್ಟು ದಿನ ಸೇವೆ ಸಲ್ಲಿಸಿದೆವು ಎಂಬುದು ಮುಖ್ಯವಲ್ಲ. ಸೇವಾವಧಿಯಲ್ಲಿ ಪ್ರಾಮಾಣಿಕವಾಗಿ ಎಷ್ಟು ಸೇವೆ ಸಲ್ಲಿಸಿದೆವು ಎಂಬುದು ಮುಖ್ಯ. ಅದರಂತೆ ಪಿಎಸ್ಐ ಸಿದ್ದರಾಮಯ್ಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಸಾರ್ವಜನಿಕರ ಹಾಗೂ ಇಲಾಖೆಯ ಗಮನ ಸೆಳೆದಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ಕ್ರೈಂ ಪಿಎಸ್ಐ ಬಸವರಾಜ ಹೊಸಳ್ಳಿ, ಮುಖಂಡರಾದ ಲಾಲಅಹ್ಮದ್ಸಾಬ, ರಮೇಶ ಜೋಷಿ, ನಿಂಗಪ್ಪ ಪರಂಗಿ, ಪರಶುರಾಮ ನಗನೂರ ಸೇರಿದಂತೆ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.