ರಾಯಚೂರು

28ರಿಂದ ಸಿಐಟಿಯು ಸಮ್ಮೇಳನ

Published On :

ರಾಯಚೂರು: ನಗರದಲ್ಲಿ ಸೆ.28 ಮತ್ತು 29ರಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು) ಸಂಘಟನೆಯ ಜಿಲ್ಲಾ ಸಮ್ಮೇಳನ ಆಯೋಜಿಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಕಾರ್ಯದರ್ಶಿ ಡಿ.ಎಸ್. ಶರಣಬಸವ, ನಗರದ ಮಹಿಳಾ ಸಮಾಜ ಆವರಣದಲ್ಲಿ ಸಮ್ಮೇಳನದ ಮೊದಲ ದಿನ ಸೆ.28 ರಂದು ಮಧ್ಯಾಹ್ನ 2ಕ್ಕೆ ಬಹಿರಂಗ ಸಭೆ ಆಯೋಜಿಸಲಾಗಿದೆ. ಇದಕ್ಕೂ ಪೂರ್ವದಲ್ಲಿ ನಗರದ ಸಾರ್ವಜನಿಕ ಉದ್ಯಾನವನದಿಂದ ಕಾರ್ಮಿಕರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬಹಿರಂಗ ಸಭೆಯಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಶ್ರೀರಾಮರೆಡ್ಡಿ ಮಾತನಾಡಲಿದ್ದಾರೆ. ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್, ಕಾರ್ಯದರ್ಶಿ ಆರ್.ಎಸ್. ಬಸವರಾಜ್ ಮತ್ತು ಪ್ರಾಂತ ರೈತಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಜಾಲಹಳ್ಳಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಯದರ್ಶಿ ಶೇಕ್ಷಾ ಖಾದ್ರಿ, ಡಾ.ಎನ್.ಕುಮಾರ್, ಪ್ರಾಂತ ರೈತಸಂಘದ ಮುಖಂಡ ಕೆ.ಜಿ. ವೀರೇಶ್ ಸೇರಿ ಅನೇಕರು ಭಾಗವಹಿಸಲಿದ್ದಾರೆಂದು ತಿಳಿಸಿರುವ ಅವರು, ಸೆ.29 ರಂದು ನಗರದ ವಿಠ್ಠಲ ರುಕ್ಮಿಣಿ ಕಲ್ಯಾಣ ಮಂಟಪದಲ್ಲಿ ಸಂಜೆ 5ಕ್ಕೆ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.