ನಿರ್ಭೀತಿಯಿಂದ ಹಕ್ಕು ಚಲಾಯಿಸಿ
ಕನ್ನಡಪ್ರಭ ವಾರ್ತೆ ರಾಯಚೂರು ಏ.1
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮತದಾರರ ನಿರ್ಭೀತಿಯಿಂದ ಮತದಾನ ಮಾಡಬೇಕು. ಕಡ್ಡಾಯ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಹಿತ ಕಾಯುವ ಕಾರ್ಯ ಮಾಡುವಂತೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಕರೆ ನೀಡಿದರು.
ನಗರದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಪಿಎಂಸಿಯಲ್ಲಿ ಆಯೋಜಿಸಿದ್ದ ಮತದಾರರ ಜಾಗೃತಿ ಜಾಥಾ, ಭದ್ರತಾ ಪಡೆಯ ಪಥ ಸಂಚಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಸಕ್ತ ಚುನಾವಣೆಯಲ್ಲಿ ಮತದಾರರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಭದ್ರತಾ ಪಡೆಗಳ ಪಥ ಸಂಚಲನ ಆಯೋಜಿಸಲಾಗಿದೆ ಎಂದರು.
ಕಡ್ಡಾಯ ಮತದಾನಕ್ಕೆ ಕರೆ: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಕಡಿಮೆಯಿತ್ತು. ಈ ಬಾರಿ ಮತದಾನದ ಪ್ರಮಾಣ ಹೆಚ್ಚಿಸಲು ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವ ಪ್ರಯತ್ನವಾಗಿ ಕಡ್ಡಾಯ ಮತದಾನ ಮಾಡಲು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್ ಮಾತನಾಡಿ, ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಕಾರ್ಯ ಶಾಂತಿಯುತವಾಗಿ ನಡೆಯುವಂತಾಗಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಜಿಲ್ಲೆಯಲ್ಲಿ ಮತದಾನದ ವೇಳೆ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಪೊಲೀಸ್ ಇಲಾಖೆ ಸರ್ವ ಕ್ರಮ: ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅಗತ್ಯ ಎಲ್ಲ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಂಡಿದೆ. ಮತದಾನ ಸುಗಮವಾಗಿ ನಡೆಯಲು 2 ಸಾವಿರ ಭದ್ರತಾ ಸಿಬ್ಬಂದಿಗೆ ಬೇಡಿಕೆಯಿರಿಸಲಾಗಿದೆ.
ಮತದಾರರು ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನೆರವಾಗಲಿದೆ ಎಂದರು.
ಈ ವೇಳೆ ಜಾಥಾ ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಿಂದ ಮುನ್ನೂರುವಾಡಿ, ಬಸವನಭಾವಿ ವೃತ್ತದ ಮೂಲಕ ಸಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು.
ಅರೆಸೇನಾ ಪಡೆಯ ತುಕಡಿಗಳ ನೂರಾರು ಸಿಬ್ಬಂದಿ ಈ ವೇಳೆ ಪಥ ಸಂಚಲನ ನಡೆಸಿದರು. ಜಾಥಾದಲ್ಲಿ ಹೆಚ್ಚುವರಿ ಎಸ್ಪಿ ಅಶೋಕ ಸದಲಗಿ, ಸಿಪಿಐಗಳಾದ ಚಂದ್ರಶೇಖರ್, ಕೆ. ಬಸವರಾಜ್, ಪಿಎಸ್ಐ ಬೇಬಿ ವಾಲಿಕಾರ್ ಸೇರಿ ಅನೇಕರಿದ್ದರು.
ನಾಳೆ ಸೈಕಲ್ ಜಾಥಾ
ರಾಯಚೂರು: ಜಿಲ್ಲಾಡಳಿತ ಮತ್ತು ಜಿಪಂ ಪರವಾಗಿ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಇನ್ನಿತರ ಇಲಾಖೆಗಳ ವತಿಯಿಂದ ಏ.3 ರಂದು ಮತದಾರರ ಜಾಗೃತಿಗಾಗಿ ಸೈಕಲ್ ಜಾಥಾ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 8ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಜಾಥಾ ಆರಂಭಗೊಳ್ಳಲಿದ್ದು, ನಿಜಲಿಂಗಪ್ಪ ಕಾಲನಿಯ ಎಟಿಎಂ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ. ಈ ಜಾಥಾದಲ್ಲಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಎನ್ಎಸ್ಎಸ್ ಮತ್ತು ಎನ್ಸಿಸಿ ವಿದ್ಯಾರ್ಥಿಗಳು ಹಾಗೂ ರಾಯಚೂರಿನ ಯುವಕ- ಯುವತಿ ಸಂಘಗಳ ಸದಸ್ಯರು ತಮ್ಮ ಸಂಘಗಳ ಬ್ಯಾನರ್ಗಳೊಂದಿಗೆ ಸೈಕಲ್ ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಡಳಿತ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

