ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳಲ್ಲಿ ಗೆಲವು: ಸತೀಶ್ ಜಾರಕಿಹೊಳಿ ವಿಶ್ವಾಸ
ಯಾದಗಿರಿ: ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ ಕಂಡು ಬರುತ್ತಿದ್ದು, 20 ಲೋಕಸಭಾ ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ ಎಂಬ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ೈನಗರದ ವಿವಿಧೆಡೆ ರಾಯಚೂರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕರ ಪರ ಪ್ರಚಾರ ಕೈಗೊಂಡು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಾನು ಹಲವಾರು ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಕೈಗೊಂಡಿದ್ದೇನೆ. ಆದರೆ ಎಲ್ಲೂ ಮೋದಿ ಅಲೆ ಇಲ್ಲ. ಕೇಂದ್ರದ ಕಾಂಗ್ರೆಸ್ ಯುಪಿಎ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಒಲವು ವ್ಯಕ್ತವಾಗುತ್ತಿದೆ ಎಂದರು.
ಪಕ್ಷಕ್ಕೆ ಹೆಚ್ಚಿನ ಬೆಂಬಲ: ವಿಶೇಷವಾಗಿ ಹೈ.ಕ. ಭಾಗದಲ್ಲಿ ಕಾಂಗ್ರೆಸ್ ಸರ್ಕಾರ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಂವಿಧಾನದ 371ನೇ ಕಲಂ ತಿದ್ದುಪಡಿ ಮಾಡಿರುವುದರಿಂದ ಗ್ರಾಮೀಣ ಪ್ರದೇಶದ ಯುವಕರು ಪಕ್ಷಕ್ಕೆ ಹೆಚ್ಚಿನ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇದು ಪಕ್ಷದ ಅಭ್ಯರ್ಥಿಗಳ ಗೆಲವಿಗೆ ಪ್ರಮುಖ ಕಾರಣವಾಗಬಹುದು ಎಂದು ತಿಳಿಸಿದರು.
ಮನಮೊಲಿಕೆ: ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಶರೀಫ್ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು ಶರೀಫ್ ಕಳೆದ 50 ವರ್ಷಗಳಿಂದ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಪಕ್ಷ ಗೌರವದಿಂದ ಕಂಡಿದೆ. ರಾಜ್ಯಕ್ಕೆ ಮರಳಿದ ನಂತರ ಪಕ್ಷದ ಹಿರಿಯ ನಾಯಕರು ಅವರನ್ನು ಭೇಟಿಯಾಗಿ ಪಕ್ಷದಲ್ಲಿ ಉಳಿಯುವಂತೆ ಮನಮೊಲಿಸಲಾಗುವುದು ಎಂದರು. ರಾಯಚೂರು ಲೋಕಸಭಾ ವ್ಯಾಪ್ತಿಯ ಶಾಸಕರಲ್ಲಿ ಯಾರಿಗೂ ಮಂತ್ರಿ ಮಂಡಳದಲ್ಲಿ ಸಚಿವ ಸ್ಥಾನ ನೀಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ನಮ್ಮ ಸರ್ಕಾರ 5 ವರ್ಷ ಅಧಿಕಾರದಲ್ಲಿ ಇರುತ್ತದೆ. ಈ ಚುನಾವಣೆ ನಂತರ ಹಿರಿಯ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ಹೈಕಮಾಂಡ್ನಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

