ಎರಡು ಗುಂಪುಗಳ ನಡುವೆ ಮಾರಾಮಾರಿ
ಸಿಂಧನೂರು: ನಗರದ ಜನತಾ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವನಿಗೆ ತೀವ್ರ ಸ್ವರೂಪದ ಗಾಯಗಳಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಇರ್ಫಾನ್ ಎನ್ನುವ ಯುವಕ ತೀವ್ರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಾಷಾ ಮತ್ತು ರಸೂಲ್ ಎನ್ನುವರ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಈ ಸಂದರ್ಭದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಬಡಿಗೆ, ಕಲ್ಲುಗಳಿಂದ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಏಕಾಏಕಿ ಕಲ್ಲು, ಇಟ್ಟಿಗೆ ತೂರಿದ್ದರಿಂದ ಅಕ್ಕಪಕ್ಕದ ಮನೆಗಳ ಮೇಲೆ ಬಿದ್ದು ಕೆಲಕಾಲ ಸಾರ್ವಜನಿಕರು ಆತಂಕಕ್ಕೀಡಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಶಹರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ಕಾಲೋನಿಯಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ಇದ್ದು, ಸಾರ್ವಜನಿಕರಲ್ಲಿ ಭಯ ಮನೆ ಮಾಡಿದೆ. ಕಳೆದ ಎರಡ್ಮೂರು ದಿನಗಳಿಂದ ಈ ಎರಡು ಗುಂಪುಗಳ ನಡುವೆ ಪರಸ್ಪರ ಜಗಳ ನಡೆದರೂ ಪೊಲೀಸ್ ಸಿಬ್ಬಂದಿ ನಿರ್ಲಕ್ಷ್ಯ ತಾಳಿದೆ. ಅದು ವಿಕೋಪಕ್ಕೆ ತಿರುಗಿ ತೀವ್ರಸ್ವರೂಪ ಪಡೆದುಕೊಂಡಿದೆ. ಪೊಲೀಸ್ ಸಿಬ್ಬಂದಿ ನಾಮಕಾವಸ್ತೆಗೆ ಬಂದು ಹೋಗಿದ್ದಾರೆ ಎಂದು ಸಾರ್ವಜನಿಕರು ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

