ರಾಯಚೂರು

ಆರೋಪ ಸತ್ಯಕ್ಕೆ ದೂರ: ಹಯ್ಯಾಳಕರ

Published On :

ಗುಲ್ಬರ್ಗ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದಲ್ಲಿ ಕೆಲಸ ಮಾಡುತ್ತಿರುವ ಸಿಎಸ್ಓ (ಎಸ್ಪಿ) ಕಾಂತರಾಜಪ್ಪ ಹಾಗೂ ಇತರ ಅಧಿಕಾರಿಗಳ ಮೇಲೆ  ಕೆಲವರು ವಿನಾಕಾರಣ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಈ ಆರೋಪಗಳು ಸತ್ಯಕ್ಕೆ ದೂರವಾಗಿದೆ ಎಂದು ಬಿಎಂ ಎಸ್(ಭಾರತೀಯ ಮಜ್ದುರ ಸಂಘ)ದ ಪ್ರ. ಕಾರ್ಯದರ್ಶಿ ರಾಮಚಂದ್ರ ಹಯ್ಯಾಳಕರ ಹೇಳಿದ್ದಾರೆ. ಅನಾಮಧೇಯ ಪತ್ರದಲ್ಲಿ ಕಾಂತರಾಜಪ್ಪ ಸೇರಿದಂತೆ ಎಐಎನ್ಟಿಯುಸಿ ಹಿರಿಯ ಕಾರ್ಮಿಕ ಮುಖಂಡರಾದ ಈಶಾನ್ಯ ವಲಯದ ಪ್ರ. ಕಾರ್ಯದರ್ಶಿ ರಶೀದ ಜಾವೇದ, ಕಾರ್ಮಿಕ ಮುಖಂಡ ರಾಘವೇಂದ್ರ ಕುಲಕರ್ಣಿ ಹೆಸರನ್ನು ಹಾಕಿ ಅಶ್ಲೀಲ ಶಬ್ದಗಳಿಂದ ಕೂಡಿದ ಗಂಭೀರ ಸ್ವರೂಪದ ಆರೋಪಗಳು ಮಾಡಿ ಈಶಾನ್ಯವಲಯ ಕ್ಷೇಮಾಭಿವೃದ್ಧಿ ಸಂಘ, ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರಕ್ಕೆ ಪತ್ರ ಸಲ್ಲಿಸಲಾಗಿದೆ. ಇದರಲ್ಲಿ ಮಾಡಲಾಗಿರುವ ಆರೋಪಗಳಲ್ಲಿ ಹುರುಳಿಲ್ಲವೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.