ಮತಯಂತ್ರದ ಮಾಹಿತಿ ಕೇಂದ್ರ
ರಾಯಚೂರು: ಪ್ರಸಕ್ತ ಲೋಕಸಭೆ ಚುನಾವಣೆಯ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದು, ಯುವ ಮತದಾರರಿಗೆ ಮತಯಂತ್ರದ ಬಳಕೆಯ ಕುರಿತು ನಗರಸಭೆಯ ನೂತನ ಕಟ್ಟಡದಲ್ಲಿ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದರಿಂದ ಯುವ ಮತದಾರರಿಗೆ ಇವಿಎಂಎಸ್ನ ಬಳಕೆ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಇಲ್ಲಿನ ನಗರಸಭೆ ಕಾರ್ಯಾಲಯದ ಹೊಸ ಕಟ್ಟಡದ ಮೊದಲ ಅಂತಸ್ತಿನಲ್ಲಿ ಸುಗಮ ಕೇಂದ್ರ ಸ್ಥಾಪಿಸಿದ್ದು, ಏ.6ರಿಂದ ಕಚೇರಿ ಅವಧಿಯಲ್ಲಿ ಮತಯಂತ್ರಗಳ ಕಾರ್ಯ ನಿರ್ವಹಣೆ ಕುರಿತು ಮತದಾರರಿಗೆ ಮಾಹಿತಿ ಒದಗಿಸಲಾಗುತ್ತದೆ. ಅದರ ಪ್ರಯೋಜನ ಪಡೆಯಲು ತಹಸೀಲ್ದಾರ್ ಬಾಲರಾಜ್ ದೇವರಖದ್ರಾ ಮನವಿ ಮಾಡಿದ್ದಾರೆ.
ಚಂದ್ರಬಂಡಾ: ಮತದಾನ ಜಾಗೃತಿ
ರಾಯಚೂರು: ಜಿಲ್ಲೆಯಲ್ಲಿ ಏ.17ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಡ್ಡಾಯ ಮತದಾನ ಕುರಿತು ಮತದಾರರ ಜಾಗೃತಿ ಕಾರ್ಯಕ್ರಮವನ್ನು ಈಚೆಗೆ ತಾಲೂಕಿನ ಚಂದ್ರಬಂಡಾ ಗ್ರಾಪಂ ವ್ಯಾಪ್ತಿಯಲ್ಲಿ ಆಯೋಜಿಸಲಾಗಿತ್ತು. ಚಂದ್ರಬಂಡಾ ಗ್ರಾಪಂ ವ್ಯಾಪ್ತಿಯಲ್ಲಿ ಶಿಕ್ಷಣ ಇಲಾಖೆ, ಕೃಷಿ, ಕಂದಾಯ ಇಲಾಖೆಯ ಸಹಯೋಗದಲ್ಲಿ ಮತದಾರರ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಗ್ರಾಪಂ ಪಿಡಿಒ ಶರ್ಪುನ್ನೀಸಾ ಬೇಗಂ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಈ ವೇಳೆ ಬೋಧಿಸಿದರು. ಗ್ರಾಮದ ಬೀದಿಗಳಲ್ಲಿ ಜಾಥಾ ಕೊಂಡೊಯ್ಯಲಾಯಿತು. ಶಾಲೆ ಮುಖ್ಯ ಗುರುಗಳು, ಶಿಕ್ಷಕರು, ಕೃಷಿ ಅಧಿಕಾರಿಗಳು, ಉಪ ತಹಸೀಲ್ದಾರರು ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

