ರಾಯಚೂರು

ಅಂಗವಿಕಲ ಆತ್ಮಹತ್ಯೆ

Published On :

ರಾಯಚೂರು: ಸಿಂಧನೂರು ತಾಲೂಕಿನ ಹಟ್ಟಿವಿರೂಪಾಪುರದಲ್ಲಿ ಅಂಗವೈಕಲ್ಯದಿಂದ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಪಂಪಾಪತಿ(42) ಎಂದು ಗುರುತಿಸಲಾಗಿದೆ. ಈತ ಒಂದು ವರ್ಷದ ಹಿಂದಷ್ಟೇ ಅಪಘಾತದಲ್ಲಿ ಬಲಗಾಲು ಮುರಿದಿದ್ದರಿಂದ ಊರುಗೋಲಿನ ಸಹಾಯದಿಂದ ನಡೆದಾಡುತ್ತಿದ್ದು, ಅದರಿಂದ ಖಿನ್ನತೆಗೊಳಗಾಗಿದ್ದ. ಅದರಿಂದಲೇ ಜೀವನದಲ್ಲಿ ಜಿಗುಪ್ಸೆಗೊಂಡು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಪ್ಪದೂರು: ಮಹಿಳೆ ಸಾವು
ರಾಯಚೂರು: ಮಾನವಿ ತಾಲೂಕಿನ ತುಪ್ಪದೂರು ಗ್ರಾಮದಲ್ಲಿ ಎತ್ತಿನ ಗಾಡಿಯ ಅಡ್ಡಾದಿಡ್ಡಿ ಸಂಚಾರದಿಂದ ಹೆದರಿ ಕೆಳಗೆ ಬಿದ್ದು ಗಾಯಗೊಂಡ ಮಹಿಳೆಯೊಬ್ಬಳು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾಳೆ. ಮೃತಳನ್ನು ಗ್ರಾಮದ ಹುಸೇನಮ್ಮ(55) ಎಂದು ಗುರುತಿಸಲಾಗಿದೆ. ಈಕೆ ತನ್ನ ಊರಿನಲ್ಲಿ ಬಂಡಿ ದಾರಿಯಲ್ಲಿ ಸಾಗುತ್ತಿದ್ದ ವೇಳೆ ಮಾರ್ಗದಲ್ಲಿ ಬಂದ ಎತ್ತಿನಗಾಡಿಯ ಎತ್ತುಗಳು ಅಡ್ಡಾದಿಡ್ಡಿ ಚಲಿಸಿದ್ದರಿಂದ ಭೀತಿಗೊಳಗಾದ ಈಕೆ ಎತ್ತುಗಳು ತನ್ನ ಮೈಮೇಲೆ ಬರುವ ಭಯದಿಂದ ಆಯತಪ್ಪಿ ಕೆಳಗೆ ಬಿದ್ದು ಕಲ್ಲು ಬಡಿದು ತೀವ್ರ ಗಾಯಗೊಂಡಿದ್ದಾಳೆ. ರಾಯಚೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ನಂತರ ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತನ ಸಾವು
ರಾಯಚೂರು: ಸಿಂಧನೂರು ಪಟ್ಟಣದ ರಾಯಚೂರು ರಸ್ತೆಯಲ್ಲಿನ ಅಂಗಡಿಯೊಂದರ ಎದುರು ಹೃದಯಾಘಾತದಿಂದ ಅಪರಿಚಿತ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಮೃತನು 30ರಿಂದ 35 ವರ್ಷ ವಯಸ್ಸಿನವನಾಗಿದ್ದು, ಮಂಗಳವಾರ ರಾತ್ರಿ ಸಿಂಧನೂರು ನಗರದ ರುದ್ರಗೌಡ ಪೆಟ್ರೋಲ್ ಬಂಕ್ ಎದುರಿಗಿರುವ ಮಹಾಲಕ್ಷ್ಮಿ ಟ್ರೇಡರ್ಸ್ ಗೊಬ್ಬರದ ಅಂಗಡಿಯ ಶೆಟರ್‌ಗೆ ಆಸರೆಯಾಗಿ ಕುಳಿತಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.