ಅಭಿವೃದ್ಧಿ ನಿರ್ಲಕ್ಷ್ಯ; ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ
ಲಿಂಗಸ್ಗೂರು: ತಾಲೂಕಿನ ಹಿರೇಯರದಿಹಾಳ ಮತ್ತು ಚಿಕ್ಕಯರದಿಹಾಳ ಗ್ರಾಮದ ಅಭಿವೃದ್ಧಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದ ಅವಳಿ ಗ್ರಾಮಸ್ಥರು ಚುನಾವಣೆಯ ಮತದಾನ ಬಹಿಷ್ಕರಿಸುವುದಾಗಿ ಸಹಾಯಕ ಆಯುಕ್ತರ ಕಚೇರಿ ಶಿರಸ್ತೇದಾರ ಭಾನುಮತಿಗೆ ಮನವಿ ಸಲ್ಲಿಸಿದರು.
ಅವಳಿ ಗ್ರಾಮಗಳಲ್ಲಿ ಕುಡಿವ ನೀರು, ರಸ್ತೆ ಸೇರಿದಂತೆ ಮೂಲ ಸೌಕರ್ಯ ಮರೀಚಿಕೆಯಾಗಿದ್ದು, ಚುನಾವಣೆ ವೇಳೆ ಮತದಾರರನ್ನು ಆಸೆ ಆಮಿಷಗಳಿಂದ ತಮ್ಮತ್ತ ಸೆಳೆಯಲು ಕುತಂತ್ರ ನಡೆಸಿ ನಂತರ ಮರಳಿ ನೋಡದ ಭ್ರಷ್ಟ ಜನಪ್ರತಿನಿಧಿಗಳ ಅವಶ್ಯಕತೆ ನಮಗೆ ಬೇಕಿಲ್ಲ. ಅಲ್ಲದೆ ಇವರ ತಾಳಕ್ಕೆ ತಕ್ಕಂತೆ ಕುಣಿಯುವ ಅಧಿಕಾರಿ ವರ್ಗ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆಗಳು: ಆಮದಿಹಾಳ ಗ್ರಾಮದಿಂದ ಅವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಅವಳಿ ಗ್ರಾಮಗಳಿಗೆ ಪೂರೈಕೆ ಮಾಡುವ ಕುಡಿಯುವ ನೀರು ಫ್ಲೋರೈಡ್ ಅಂಶ ಹೊಂದಿದ್ದು, ಶುದ್ಧೀಕರಣಗೊಳಿಸಿ ಸರಬರಾಜು ಮಾಡಬೇಕು. 2 ಕಿಮೀ ಅಂತರದ ಆಮದಿಹಾಳ ಗ್ರಾಮದ ಸಿಂಡಿಕೇಟ್ ಬ್ಯಾಂಕ್ನಲ್ಲಿ ಖಾತೆ ತೆರೆಯಲು ಅಧಿಕಾರಿಗಳಿಗೆ ಸೂಚಿಸಬೇಕು. ಭೂ ಸೇನಾ ನಿಗಮ ನಿರ್ಮಿಸಿದ ಕುಡಿಯುವ ನೀರಿನ ಟ್ಯಾಂಕ್ ನಿರುಪಯುಕ್ತವಾಗಿದ್ದು, ಕ್ರಮ ಕೈಗೊಳ್ಳಬೇಕು. ಗ್ರಾಮಗಳಿಗೆ ಬಸ್ ಸೌಕರ್ಯ ಕಲ್ಪಿಸಬೇಕು. ಈ ಎಲ್ಲ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಮತದಾನ ಬಹಿಷ್ಕರಿಸಿ ಉಗ್ರ ಹೋರಾಟ ನಡೆಸಲಾಗುವುದೆಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಅವಳಿ ಗ್ರಾಮಸ್ಥರಾದ ಶರಣಗೌಡ, ಕೇಶವರೆಡ್ಡಿ, ಜಯದೀಪ, ಯಲ್ಲಪ್ಪ, ಶರಣಪ್ಪ, ಅಮರೇಶ, ಶಿವರಾಯ, ವೀರಭದ್ರಯ್ಯ, ದುರುಗಪ್ಪ, ಆನಂದ, ಹನುಮಪ್ಪ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

