ಮತದಾನ ಜಾಗೃತಿ ಕಾರ್ಯಕ್ರಮ
ರಾಯಚೂರು: ಲೋಕಸಭಾ ಚುನಾವಣೆ ಮತದಾನದ ಪ್ರಕ್ರಿಯೆಯಲ್ಲಿ 18ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ತಪ್ಪದೇ ಮತ ಹಾಕುವಂತೆ ಜಿಪಂ ಯೋಜನಾಧಿಕಾರಿ ಡಾ.ಟಿ. ರೋಣಿ ಕರೆ ನೀಡಿದರು. ಶುಕ್ರವಾರ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ಹಾಗೂ ಎಸ್ಎಸ್ಆರ್ಜಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ರಾಮಾಂಜನೇಯ, ಜಿಲ್ಲಾ ವಾರ್ತಾಧಿಕಾರಿ ಟಿ. ಕನುಮಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಿಜಲಿಂಗಪ್ಪ ಸೇರಿ ಮತದಾರರ ಜಾಗೃತಿ ಸಮಿತಿ ಸದಸ್ಯರಿದ್ದರು. ಕಾಲೇಜು ವಿದ್ಯಾರ್ಥಿಗಳಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮದ್ಯ ಮಾರಾಟ ನಿಷೇಧ
ರಾಯಚೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಚುನಾವಣೆ ಸುಗಮ ಹಾಗೂ ಶಾಂತಿಯುತವಾಗಿ ನಡೆಯುವಂತಾಗಲು ಜಿಲ್ಲಾದ್ಯಂತ ಏ.15ರಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಆದೇಶ ಹೊರಡಿಸಿ, ಜಿಲ್ಲಾದ್ಯಂತ ಏ.15ರ ಬೆಳಗ್ಗೆ 6 ರಿಂದ ಏ.17ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ, ಎಲ್ಲಾ ತರಹದ ಸಾರಾಯಿ, ವೈನ್, ಬಿಯರ್, ಬ್ರಾಂಡಿ ಇತ್ಯಾದಿ ಮದ್ಯದ ಸಗಟು ಹಾಗೂ ಚಿಲ್ಲರೆ ಮಾರಾಟ ನಿಷೇಧಿಸಿದ್ದಾರೆ.
ಈ ಅವಧಿಯಲ್ಲಿ ಹೊರಗಿನಿಂದ ಮದ್ಯ ಸಾಗಣೆ ಮತ್ತು ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಗುಡದೂರು: ಜಾಗೃತಿ ಜಾಥಾ
ಮಸ್ಕಿ: ಇಲ್ಲಿಗೆ ಸಮೀಪದ ಗುಡದೂರು ಗ್ರಾಪಂ ಕಚೇರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರಿಂದ ಶುಕ್ರವಾರ ಮತದಾರರ ಜಾಗೃತಿ ಜಾಥಾ ನಡೆಯಿತು.
ಜಾಥಾದಲ್ಲಿ ಮಾತನಾಡಿದ ಬಳಗಾನೂರು ಹೋಬಳಿಯ ಅಂಗನವಾಡಿ ಮೇಲ್ವಿಚಾರಕಿ ಶಾಂತಾ, ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ಸಮರ್ಥ ಅಭ್ಯರ್ಥಿಗೆ ಮತದಾನ ಮಾಡಬೇಕೆಂದು ಮನವಿ ಮಾಡಿ, ಕಡ್ಡಾಯ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕರೆ ನೀಡಿದರು.
ಕಾರ್ಯಕರ್ತರೆಲ್ಲರಿಗೂ ಈ ಸಂದರ್ಭ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಾದ ಸ್ವರ್ಣಗೌರಮ್ಮ, ಸರ್ವಮಂಗಳಾ, ಬಸಮ್ಮ, ಶ್ರೀದೇವಿ, ಮುನಿರಾಬೇಗಂ ಮತ್ತು ಕರ ವಸೂಲಿಗಾರರಾದ ಮಹಾದೇವಪ್ಪ, ಮಲ್ಲಿಕಾರ್ಜುನ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

