ಹೈ.ಕ.ದಲ್ಲಿ ಕಾಂಗ್ರೆಸ್ ಜಯಭೇರಿ: ಅನ್ವರಿ
ಮಸ್ಕಿ: ಹೈ-ಕದ ಎಲ್ಲ ಐದು ಲೋಕಸಭೆ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸುವುದು ನಿಶ್ಚಿತ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಬಸವರಾಜ ಪಾಟೀಲ್ ಅನ್ವರಿ ಭವಿಷ್ಯ ನುಡಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ 20 ಕಡೆ ಗೆಲವು ಸಾಧಿಸಲಿದೆ. ಯುಪಿಎ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯ ಜನತೆ ಮೆಚ್ಚಿದ್ದು ಬೆಂಬಲಿಸಲಿದ್ದಾರೆಂದರು.
ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಬಿಜೆಪಿ ಸೇರ್ಪಡೆಯಾಗದೇ ಏಕಪಕ್ಷೀಯ ನಿರ್ಧಾರ ಕೈಗೊಂಡರು. ಅದರಿಂದಾಗಿ ಅವರು ಬಿಜೆಪಿಯಲ್ಲಿಯೇ ಅಸಹಾಯಕರಾಗಿದ್ದಾರೆಂದ ಅವರು, ತಾವು ತಮ್ಮ ಎಲ್ಲ ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರವೇ ಕಾಂಗ್ರೆಸ್ಗೆ ಸೇರಿದ್ದಾಗಿ ತಿಳಿಸಿದರು.
ತಾವೊಬ್ಬ ಶಾಪಗ್ರಸ್ತ ರಾಜಕಾರಣಿ. ಈ ಹಿಂದೆ ರಾಜಕೀಯವಾಗಿ ತಪ್ಪು ನಿರ್ಧಾರ ಕೈಗೊಂಡಿದ್ದು, ಅಂಥ ನಿರ್ಧಾರ ಮತ್ತೆ ಕೈಗೊಳ್ಳುವುದಿಲ್ಲ. ಕಾಂಗ್ರೆಸ್ ಸೇರಿದ್ದು ಅಲ್ಲಿಯೇ ಮುಂದುವರಿಯುವುದಾಗಿ ಹೇಳಿದ ಅವರು, ರಾಜ್ಯದಲ್ಲಿ ಮೋದಿ ಅಲೆ ಎಂಬುದಿಲ್ಲ ಎಂದು ಹೇಳಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಸಿದ್ದಣ್ಣ ಹೂವಿನಬಾವಿ, ಹನುಮಂತಪ್ಪ, ಸೂಗಣ್ಣ ಬಾಳೇಕಾಯಿ ಇದ್ದರು.
ಲೂಟಿ ಮಾಡಿದ್ದೇ ಕಾಂಗ್ರೆಸ್ ಸಾಧನೆ: ಕೆ. ವಿರೂಪಾಕ್ಷಪ್ಪ
ಸಿಂಧನೂರು: ಕಾಂಗ್ರೆಸ್ ಕಳೆದ 10ವರ್ಷದಲ್ಲಿ ವಿವಿಧ ಹಗರಣಗಳ ಮೂಲಕ ದೇಶವನ್ನು ಲೂಟಿ ಮಾಡಿರುವುದೇ ಸಾಧನೆಯಾಗಿದೆ. ಭ್ರಷ್ಟಾಚಾರರಹಿತ ಆಡಳಿತಕ್ಕೆ ಬಿಜೆಪಿಗೆ ಬೆಂಬಲಿಸಿ ಎಂದು ಮಾಜಿ ಸಂಸದ, ಬಿಜೆಪಿ ಮುಖಂಡ ಕೆ. ವಿರೂಪಾಕ್ಷಪ್ಪ ಹೇಳಿದರು.
ತಾಲೂಕಿನ (ಇ.ಜೆ) ಹೊಸಳ್ಳಿ, ಅಮರಾಪುರ, ಹಟ್ಟಿ ವಿರೂಪಾಪುರ, ಹನುಮಾನನಗರ ಕ್ಯಾಂಪ್, ಹೊಸಳ್ಳಿ ಕ್ಯಾಂಪ್ ಹಾಗೂ ಶ್ರೀಪುರಂಜಂಕ್ಷನ್ಗಳಲ್ಲಿ ಬಿಜೆಪಿ ಕೊಪ್ಪಳ ಲೋಕಸಭಾ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ಗೆ ಸಮಸ್ಯೆಗಳ ಅರಿವಿಲ್ಲ. ಸುಮಾರು 60 ವರ್ಷ ಆಳಿದರೂ, ಬಡತನ, ನಿರುದ್ಯೋಗ ನಿವಾರಣೆ ಮಾಡಲು ಸಾಧ್ಯವಿಲ್ಲ. ಕೆಳವರ್ಗಗಳನ್ನು ಕೇವಲ ಮತಬ್ಯಾಂಕ್ ಮಾಡಿಕೊಂಡಿದೆಯೇ ಹೊರತು ಅಭಿವೃದ್ಧಿಗೆ ಮುಂದಾಗಿಲ್ಲ. ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ. ದೇಶದ ಸಮಗ್ರ ಅಭ್ಯುದಯ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡ ಕೊಲ್ಲಾ ಶೇಷಗಿರಿರಾವ್ ಮಾತನಾಡಿ, ದೇಶದಲ್ಲಿ ಬದಲಾವಣೆ ತರಲೆಂದು ಯುವಪೀಳಿಗೆ ಹಾತೊರೆಯುತ್ತಿದೆ. ಕಾಂಗ್ರೆಸ್ನಲ್ಲಿ ನಾಯಕರೇ ಇಲ್ಲ. ಬಿಜೆಪಿಗೆ ಮತ ನೀಡುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು. ರಾಜಶೇಖರ ಪಾಟೀಲ್, ವೆಂಕನಗೌಡ ಮಲ್ಕಾಪುರ, ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ಎಂ. ದೊಡ್ಡಬಸವರಾಜ, ತಾಲೂಕಾಧ್ಯಕ್ಷ ದೇವೇಂದ್ರಪ್ಪ ಯಾಪಲಪರ್ವಿ, ತಾ.ಪಂ. ಸದಸ್ಯ ವೆಂಕೋಬ ಸಾಸಲಮರಿ, ಹಟ್ಟಿ ಪಟೇಲ, ಲಿಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

