ರಾಯಚೂರು

ವಿಷ ಸೇವನೆ: ವ್ಯಕ್ತಿ ಸಾವು

Published On :

ರಾಯಚೂರು: ತಾಲೂಕಿನ ಕೊರ್ತಕುಂದಾ ಗ್ರಾಮದಲ್ಲಿ ವಿಷಾಹಾರ ಆಕಸ್ಮಿಕ ಸೇವನೆಯಿಂದ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಮೃತನನ್ನು ತಿಮ್ಮಪ್ಪ(70) ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಆಹಾರ ಸೇವಿಸಿದ ಮೇಲೆ ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗೆ ನಗರದ ರಿಮ್ಸ್ ಬೋಧಕ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಸಾವಿಗೀಡಾಗಿದ್ದಾನೆ. ಈತನ ಸಾವಿಗೆ ಆಹಾರದಲ್ಲಿ ವಿಷ ಸೇರಿದ್ದೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಯಾಪಲದಿನ್ನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕಸ್ಮಿಕ ಬೆಂಕಿ: ಬಣವೆ ಭಸ್ಮ
ರಾಯಚೂರು: ಸಿಂಧನೂರು ತಾಲೂಕಿನ ಬಪ್ಪೂರು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಬಣವೆ ಬೆಂಕಿಗಾಹುತಿಯಾಗಿವೆ. ಗ್ರಾಮದ ಯಂಕಪ್ಪ ಎಂಬುವವರಿಗೆ ಸೇರಿದ ಹೊಲದಲ್ಲಿರಿಸಿದ್ದ ಬಣವೆಗೆ ವಿದ್ಯುತ್ ತಂತಿಯಿಂದ ಎಗರಿದ ಕಿಡಿಗಳಿಂದ ಬೆಂಕಿ ಹೊತ್ತಿಕೊಂಡು ಒಟ್ಟು 40 ಸಾವಿರ ಆಸ್ತಿಗೆ ಹಾನಿಯಾಗಿದೆ. ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾನುವಾರು ಸಾವು
ರಾಯಚೂರು: ಸಿಂಧನೂರು ತಾಲೂಕಿನ ಗೋನಾಳ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಆಕಳು ಮತ್ತು ಎಮ್ಮೆ ಸಾವಿಗೀಡಾಗಿವೆ. ಗ್ರಾಮದ ಹೊಲದಲ್ಲಿ ಆಕಳು ಮತ್ತು ಎಮ್ಮೆ ಮೇಯಲು ತೆರಳಿದ್ದ ವೇಳೆ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದ್ದು, 50 ಸಾವಿರ ಆಸ್ತಿ ಹಾನಿಯಾಗಿದೆ ಎಂದು ಪೊಲೀಸರಿಗೆ ದೂರಲಾಗಿದೆ. ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೇಂದಿ ಮಾರಾಟ: ಸೆರೆ
ರಾಯಚೂರು: ಇಲ್ಲಿನ ಮೈಲಾರ ನಗರದ ಸ್ಮಶಾನದಲ್ಲಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಾಗಪ್ಪ ಮತ್ತು ಬುಷಯ್ಯ ಎಂದು ಗುರುತಿಸಲಾಗಿದೆ. ಇವರು ಸ್ಮಶಾನದಲ್ಲಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರಿಂದ 2 ಪ್ಲಾಸ್ಟಿಕ್ ಚೀಲದಲ್ಲಿದ್ದ 60 ಲೀಟರ್ ಸೇಂದಿ ಹಾಗೂ 25 ಜಪ್ತಿ ಮಾಡಲಾಗಿದೆ. ಈ ಕುರಿತು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.