ರಾಯಚೂರು

ವಾಮಾಚಾರ ಭೀತಿ

Published On :

ರಾಯಚೂರು: ತಾಲೂಕಿನ ಮನ್ಸಲಾಪುರ ಗ್ರಾಮದ ಸಂಪರ್ಕ ರಸ್ತೆಯಲ್ಲಿ ಕಿಡಿಗೇಡಿಗಳು ವಾಮಾಚಾರ ಮಾಡಿರುವುದು ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದು, ಗ್ರಾಮಸ್ಥರು ಭೀತಿಗೆ ಒಳಗಾಗಿದ್ದಾರೆ.
ರಾಯಚೂರು ನಗರದಿಂದ ಮನ್ಸಲಾಪುರಕ್ಕೆ ಸಂಪರ್ಕ ಕಲ್ಪಿಸುವ ಮನ್ಸಲಾಪುರ ಗ್ರಾಮದ ಕ್ರಾಸ್ ಬಳಿ ವಾಮಾಚಾರ ಮಾಡಿರುವುದು ಪತ್ತೆಯಾಗಿದೆ. ಅರಿಶಿನ, ಕುಂಕುಮ ಬಳಸಿ ಉದ್ದನೆಯ ಗೆರೆ ಎಳೆದು ಅದರ ಮೇಲೆ ತೆಂಗಿನಕಾಯಿ ಮತ್ತು ಕಪ್ಪುಬಟ್ಟೆಯ ಗಂಟುಗಳನ್ನು ಇರಿಸಿ ವಾಮಾಚಾರ ಮಾಡಿರುವುದು ಗ್ರಾಮಸ್ಥರಲ್ಲಿ ಭಯಕ್ಕೆ ಕಾರಣವಾಗಿದೆ.
ಲೋಕಸಭೆ ಚುನಾವಣೆಯ ಮತದಾನ ಇತ್ತೀಚೆಗೆ ಮುಗಿದಿದ್ದು, ಫಲಿತಾಂಶದ ಮೇಲೆ ಪ್ರಭಾವ ಬೀರುವ ನಂಬಿಕೆಯೊಂದಿಗೆ ಇಂಥ ವಾಮಾಚಾರ ಮಾಡಿರುವ ಸಾಧ್ಯತೆಯಿದೆ ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದು, ಈ ಮಾರ್ಗದಲ್ಲಿ ಈ ಹಿಂದೆಯೂ ಚುನಾವಣೆ ಸಂದರ್ಭದಲ್ಲಿಯೇ ವಾಮಾಚಾರ ಮಾಡಿದ್ದು ಪತ್ತೆಯಾಗಿತ್ತು. ಸದ್ಯ ಮತ್ತೆ ವಾಮಾಚಾರ ಎಸಗಿರುವುದು ತಮಗೆ ಆತಂಕ ತಂದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.