ಮಾನವಿ: ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸ
ರಾಯಚೂರು: ಮಾನವಿ ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿಜ್ಞಾನ ಶಿಕ್ಷಕ ಅರುಣಕುಮಾರ್ ಉಪನ್ಯಾಸ ನೀಡಿ, ಭೂಮಿಯಲ್ಲಿ ವಾಸಿಸುವ ಎಲ್ಲರೂ ಪರಿಸರ ಸಂರಕ್ಷಣೆ ಮೂಲಕ ಭೂಮಿಯ ಮೇಲ್ಮೈ ವಾತಾವರಣದ ರಕ್ಷಣೆ ಕಾರ್ಯಕ್ಕೆ ಮುಂದಾಗಬೇಕು. ಆಗ ಮಾತ್ರ ಭೂಮಿ ಮೇಲಿನ ಜೀವಿಗಳು ಸುರಕ್ಷಿತ ಬದುಕು ನಡೆಸಲು ಸಾಧ್ಯ ಎಂದರು.
ಸ್ವಚ್ಛಗಾಳಿ, ನಿರ್ಮಲ ಪರಿಸರ ಜೀವ ಸಂಕುಲಕ್ಕೆ ಬೇಕಾದ ಎಲ್ಲ ರೀತಿಯ ಪೋಷಕಾಂಶಗಳನ್ನು ಭೂಮಿ ಒದಗಿಸುತ್ತದೆ. ಭೂಮಿಯ ಮೇಲಿನ ಪರಿಸರ ಹಾಳುಗೆಡವದಂತೆ ಮನವಿ ಮಾಡಿದರು.
ಶಿಕ್ಷಕ ಎಚ್.ಟಿ. ಪ್ರಕಾಶಬಾಬು ಮಾತನಾಡಿದರು. ಅಧ್ಯಕ್ಷತೆ ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ. ನರಸಿಂಹ ವಹಿಸಿದ್ದರು. ನೇತಾಜಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ. ವಿಜಯಲಕ್ಷ್ಮಿ, ಶಿಕ್ಷಕ ನಾಗರಾಜ ಕೊಳ್ಳಿ, ಶಿಕ್ಷಕಿ ಶ್ರೀದೇವಿ, ಬಸವರಾಜ ನೇತಾಜಿ ಶಿಕ್ಷಣ ಸಂಸ್ಥೆಯ ಶಿಕ್ಷಕರು, ತರಬೇತಿ ಶಿಬಿರದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

