ಕೃಷಿ ವಿವಿ ಕಾರ್ಮಿಕರ ಹೋರಾಟಕ್ಕೆ ಸಮುದಾಯದ ಬೆಂಬಲ
ರಾಯಚೂರು: ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೃಷಿ ವಿವಿ ಹಂಗಾಮಿ ನೌಕರರ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟ ಧರಣಿಗೆ ಗುರುವಾರ ಸಮುದಾಯ ರಾಯಚೂರು ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.
ಸಮುದಾಯ ಸಂಘಟನೆಯ ಮುಖ್ಯಸ್ಥ ತಾಯಣ್ಣ ಯರಗೇರಾ ಅವರು ಧರಣಿ ನಿರತರ ಬಳಿ ತೆರಳಿ ಬೆಂಬಲ ವ್ಯಕ್ತಪಡಿಸಿ, ಕೃಷಿ ವಿವಿ ಯಲ್ಲಿ ಕಳೆದ 15 ರಿಂದ 20ವರ್ಷ ದುಡಿದ ಕಾರ್ಮಿಕರಿಗೆ ಹೊರಗುತ್ತಿಗೆ ಟೆಂಡರ್ ಮೂಲಕ ಕಾರ್ಮಿಕರ ನೇಮಕದಿಂದ ಸಂಕಷ್ಟ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕಾರ್ಮಿಕರಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲತ್ತುಗಳನ್ನು ಕೃಷಿ ವಿವಿ ಒದಗಿಸಬೇಕು. ಕಾರ್ಮಿಕರ ಸೇವಾ ಭದ್ರತೆಗೆ ಆದ್ಯತೆ ನೀಡುವಂತೆ ಸಮುದಾಯ ಸಂಘಟನೆಯವರು ಆಗ್ರಹಿಸಿದರು. ಕೃಷಿ ವಿವಿ ಹಂಗಾಮಿ ನೌಕರರ ಸಂಘದ ಗೌರವಾಧ್ಯಕ್ಷ ಆರ್. ಮಾನಸಯ್ಯ ಮಾತನಾಡಿ, ಕೃಷಿ ವಿವಿ ಕಾರ್ಮಿಕರ ಹೋರಾಟಕ್ಕೆ ನಗರದ ಸಂಘ ಸಂಸ್ಥೆಗಳು ಬೆಂಬಲಿಸುವಂತೆ ಮನವಿ ಮಾಡಿದರು. ಗುರುವಾರ ನಡೆದ ಧರಣಿಯಲ್ಲಿ ಯಾದಗಿರಿ ಜಿಲ್ಲೆಯ ಭೀಮರಾಯನಗುಡಿಯ ಕೃಷಿ ಸಂಶೋಧನಾ ಕೇಂದ್ರದ ಕಾರ್ಮಿಕರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

