ನೀರಿನ ಸಮಸ್ಯೆ: ಪರಿಹಾರ ಕ್ರಮಕ್ಕೆ ಮಾರುತಿ ಸೂಚನೆ
ರಾಯಚೂರು: ಮಾನವಿ ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತಾಪಂ ಅಧಿಕಾರಿಗಳು ಮೂರು ದಿನದಲ್ಲಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಸಹಾಯಕ ಆಯುಕ್ತ ಎಂ.ಪಿ.ಮಾರುತಿ ಆದೇಶಿಸಿದರು. ಮಾನವಿ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಈಚೆಗೆ ಕುಡಿಯುವ ನೀರಿನ ಅಭಾವ ಪರಿಸ್ಥಿತಿ ನಿರ್ವಹಣೆ ಕುರಿತು ಸಭೆಯಲ್ಲಿ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಪರಿಸ್ಥಿತಿ ನಿಭಾಯಿಸಲು ಪುರಸಭೆ ಅಧಿಕಾರಿಗಳು ಮತ್ತು ಗ್ರಾಪಂ ಪಿಡಿ ಗಳು ಮುಂದಾಗಬೇಕು ಎಂದು ಸೂಚಿಸಿದರು. ಹೊಸ ಕೊಳವೆಬಾವಿ ಕೊರೆಯಿಸುವುದು ಹಾಗೂ ಫ್ಲಶಿಂಗ್, ಪೈಪ್ಲೈನ್, ಮೋಟಾರ್ ರಿಪೇರಿ ಮತ್ತು ಕೆರೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ನೀರಿನ ಸಮಸ್ಯೆ ಯಾವ್ಯಾವ ಕ್ರಮಗಳನ್ನು ಕೈಗೊಳ್ಳಬೇಕೋ ಅವುಗಳನ್ನು ಆಯಾ ಗ್ರಾಪಂ ಅಧಿಕಾರಿಗಳು ಗ್ರಾಮಗಳಲ್ಲಿಯೇ ವಾಸವಾಗಿದ್ದು, ಸಮಸ್ಯೆ ಪರಿಹರಿಸಲು ಆದೇಶಿಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ನಿಟ್ಟಾಳೆ, ತಹಸೀಲ್ದಾರ ಸಿದ್ದಲಿಂಗಪ್ಪ ನಾಯಕ, ತಾಪಂ ಇಒ ಮಹಾದೇವಪ್ಪ ಪಾಟೀಲ್ ಸೇರಿ ಅನೇಕರಿದ್ದರು.
ಮೇ 1ರಂದು ಕಾರ್ಮಿಕ
ದಿನಾಚರಣೆ
ರಾಯಚೂರು: ತಾಲೂಕಿನ ದೇವಸೂಗೂರು ಗ್ರಾಮದ ಶಿಲ್ಪಾ ಮೆಡಿಕೇರ್ ನೌಕರರ ಸಂಘದಿಂದ ಮೇ 1 ರಂದು ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಿಐಟಿಯು ಸಂಘಟನೆಯ ಆಶ್ರಯದಲ್ಲಿ ಶಕ್ತಿನಗರದ ಶಿಲ್ಪಾ ಮೆಡಿಕೇರ್ ಎದುರುಗಡೆ ನಡೆಯಲಿರುವ ಕಾರ್ಯಕ್ರಮವನ್ನು ಬೆಳಗ್ಗೆ 10ಕ್ಕೆ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಪ್ರಸನ್ನಕುಮಾರ್ ಉದ್ಘಾಟಿಸುವರು. ಕಾರ್ಮಿಕ ದಿನಾಚರಣೆ ಮಹತ್ವವವನ್ನು ಈ ಸಂದರ್ಭದಲ್ಲಿ ವಿವ ರಿಸಲಾಗುವುದು. ಮುಖ್ಯ ಅತಿಥಿಗಳಾಗಿ ಸಂಘಟನೆಯ ಪ್ರಮುಖರಾದ ಶೇಕ್ಷಾಖಾದ್ರಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಶಿಲ್ಪಾ ಮೆಡಿಕೇರ್ ನೌಕರರ ಸಂಘದ ಅಧ್ಯಕ್ಷ ಎಂ.ಶರಣಗೌಡ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಆಯೋಜಕರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

