ಆಧುನಿಕ ಜೀವನಶೈಲಿಯಿಂದ ಆರೋಗ್ಯ ಸಮಸ್ಯೆ
ರಾಯಚೂರು: ಆಧುನಿಕ ಜೀವನ ಶೈಲಿಯಿಂದಾಗಿ ಮಾನವನ ಬದುಕು ಒತ್ತಡದಲ್ಲಿ ಸಿಲುಕಿದೆ. ಅದರಿಂದ ಅನೇಕ ರೀತಿಯ ಆರೋಗ್ಯ ಸಂಬಂಧಿ ಸಮಸ್ಯೆಗಳು ಎದುರಾಗುತ್ತಿವೆ. ಇಂಥ ಆರೋಗ್ಯ ಸಂಬಂಧಿ ಸಮಸ್ಯೆಗಳ ಪರಿಹಾರಕ್ಕೆ ನೈಸರ್ಗಿಕ ಚಿಕಿತ್ಸೆ ಪದ್ಧತಿ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಸಂತಕುಮಾರ್ ಹೇಳಿದರು.
ನಗರದಲ್ಲಿ ಭಾನುವಾರ ದೀರ್ಘಾಯು ಪ್ರಾಕೃತಿಕ ಆರೋಗ್ಯಧಾಮದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ಆಧುನಿಕ ಜೀವನಶೈಲಿಯು ಮಾನವನಿಗೆ ಒತ್ತಡಗಳ ಕಾರಣಕ್ಕೆ ಅನಾರೋಗ್ಯ ತಂದಿಡುತ್ತಿದೆ. ಈ ಸಮಸ್ಯೆಗಳಿಗೆ ಪ್ರಾಕೃತಿಕ ಚಿಕಿತ್ಸೆಯಿಂದ ಪರಿಹಾರ ಸಾಧ್ಯ. ಉತ್ತಮ ಜೀವನ, ಆರೋಗ್ಯ ಶೈಲಿಯ ಮೂಲಕ ಆರೋಗ್ಯ ಕಾಪಾಡಿಕೊಳ್ಳುವತ್ತ ಹೆಚ್ಚಿನ ಗಮನಹರಿಸಲು ಕರೆ ನೀಡಿದರು.
ಯಾಂತ್ರಿಕ ಬದುಕಿನಿಂದ ಅನೇಕ ಕಾಯಿಲೆ: ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಆರ್.ತಿಮ್ಮಯ್ಯ ಮಾತನಾಡಿ, ಮಾನವನ ಇಂದಿನ ಜೀವನ ಶೈಲಿಯಲ್ಲಿ ದೈಹಿಕ ಶ್ರಮಕ್ಕೆ ಅವಕಾಶವಿಲ್ಲ. ಯಾಂತ್ರಿಕ ಬದುಕಿನಿಂದ ಮಾನವ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ. ಇಂಥ ಸಮಸ್ಯೆಗಳಿಗೆ ಪ್ರಾಕೃತಿಕ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಕರೆ ನೀಡಿದರು. ಇದಕ್ಕೂ ಮುನ್ನ ನಗರದ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರು ದೀರ್ಘಾಯು ಪ್ರಕೃತಿ ಆರೋಗ್ಯಧಾಮದ ಕಟ್ಟಡವನ್ನು ಉದ್ಟಾಟಿಸಿ, ಪ್ರಕೃತಿ ಜೀವನ ವಿಧಾನವನ್ನು ಋಷಿಮುನಿಗಳು ಪಾಲಿಸುವ ಮೂಲಕ ಆರೋಗ್ಯವಂತರಾಗಿ ಬಾಳಿ ತೋರಿಸಿದ್ದಾರೆ. ಅದೇ ಮಾರ್ಗದಲ್ಲಿ ಎಲ್ಲರೂ ಸಾಗುವ ಅವಶ್ಯಕತೆಯಿದೆ ಎಂದರು. ರಾಯಚೂರು ವಿಕಾಸ ಪರಿಷತ್ತಿನ ಅಧ್ಯಕ್ಷ ರವಿ ಜಲ್ದಾರ್ ಮಾತನಾಡಿದರು. ಪ್ರಮುಖರಾದ ಕೊಂಡಾ ಕೃಷ್ಣಮೂರ್ತಿ, ಸಾವಿತ್ರಿ ಪುರುಷೋತ್ತಮ್ ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ದೀರ್ಘಾಯು ಪ್ರಕೃತಿ ಆರೋಗ್ಯ ಧಾಮ ಹಾಗೂ ಪ್ರಕೃತಿ ಚಿಕಿತ್ಸೆ ಸಲಹೆಗಾರ ಭೀಮಣ್ಣ ಆರೋಲಿ ವಹಿಸಿದ್ದರು. ನಗರಸಭೆ ಮಾಜಿ ಸದಸ್ಯ ಬೋಳಬಂಡೆಪ್ಪ ಕಟ್ಟಿಮನಿ, ಪಿ.ಬೂದೆಪ್ಪ, ಜಿ.ರಾಮಚಂದ್ರಪ್ಪ ಶೆಟ್ಟಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

