ರಾಯಚೂರು

ರಾಮದೇವ್ ವಿರುದ್ಧ ರಾಜದ್ರೋಹ ಕೇಸ್‌ಗೆ ಆಗ್ರಹ

Published On :

ರಾಯಚೂರು: ದಲಿತ ಸಮುದಾಯವನ್ನು ಅವಮಾನಿಸಿದ ಯೋಗಗುರು ಬಾಬಾ ರಾಮದೇವ್ ವಿರುದ್ಧ ಕೂಡಲೇ ರಾಜದ್ರೋಹ ಕೇಸ್ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ನವಕರ್ನಾಟಕ ಜಾಗೃತಿ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹೋರಾಟಗಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಆಧ್ಯಾತ್ಮ, ಯೋಗ ಶಿಕ್ಷಣದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಯೋಗ ಗುರು ಬಾಬಾ ರಾಮದೇವ ಢೋಂಗಿ ಬಾಬಾ ಆಗಿದ್ದಾರೆಂದು ಟೀಕಿಸಿದರು.
ಧರ್ಮಗುರುಗಳಾದವರು ರಾಜಕೀಯ ಪಕ್ಷಗಳ ಪರ ನಿಲ್ಲುವ ಮೂಲಕ ದೇಶದ ನಿವಾಸಿಗಳಲ್ಲಿ ದ್ವೇಷ ಭಾವನೆ ಕೆರಳಿಸುತ್ತಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ದಲಿತರಿಗೆ ಅವಹೇಳನಕಾರಿ ರೀತಿಯಲ್ಲಿ ಹೇಳಿಕೆ ನೀಡಿರುವ ಬಾಬಾ ರಾಮದೇವ್ ವಿರುದ್ಧ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ದಲಿತ ಸಮುದಾಯವನ್ನು ಅಪಮಾನ ಮಾಡಿರುವುದು ಬಾಬಾ ರಾಮದೇವ್ ಮನಸ್ಥಿತಿ ಬಹಿರಂಗಗೊಳಿಸಿದೆ. ಇಂಥ ಧರ್ಮಗುರುಗಳ ನಡೆಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು. ಸಂವಿಧಾನ ವಿರೋಧಿ ಹೇಳಿಕೆ ನೀಡುವವರ ವಿರುದ್ಧ ರಾಜ ದ್ರೋಹ ಪ್ರಕರಣ ದಾಖಲಿಸಿ ಶಿಕ್ಷೆಗೊಳಪಡಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ವಿಶ್ವನಾಥ ಪಟ್ಟಿ, ಹುಸೇನ್ ಬಾಷಾ, ಮಹೇಶ್ ಕುಮಾರ್, ಅನಂತ ರಾಜ್, ವೆಂಕಟೇಶ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.