ರಾಯಚೂರು

ಅಕ್ರಮ ಮರಳು ನಿಯಂತ್ರಣಕ್ಕೆ ಚೆಕ್‌ಪೋಸ್ಟ್

Published On :

ಲಿಂಗಸ್ಗೂರು: ಅಕ್ರಮ ಮರಳು ಸಾಗಾಟ ನಿಯಂತ್ರಿಸಲು 8 ಕಡೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯುವಂತೆ ಸಹಾಯಕ ಆಯುಕ್ತ ಟಿ. ಯೋಗೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಸಹಾಯಕ ಆಯುಕ್ತರ ಕಚೇರಿಯಲ್ಲಿ ಲಿಂಗಸ್ಗೂರು ಮತ್ತು ಸಿಂಧನೂರು ತಾಲೂಕು ಮರಳು ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಲಿಂಗಸ್ಗೂರು ತಾಲೂಕಿನ ರೋಡಲಬಂಡಾ(ಯುಕೆಪಿ), ಮುದಗಲ್, ಮೆದಿಕಿನಾಳ, ಸರ್ಜಾಪುರ ಹಾಗೂ ಸಿಂಧನೂರು ತಾಲೂಕಿನ ಹಂಪನಾಳ, ರಾಗಲಪರ್ವಿ, ಶ್ರೀರಾಮಪುರ ಜಂಕ್ಷನ್, ಸಿಂಧನೂರು ಪಟ್ಟಣದಲ್ಲಿ ಚೆಕ್‌ಪೋಸ್ಟ್ ತೆರೆಯುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಕ್ರಮ ಮರಳು ಸಾಗಾಟ ನಿಯಂತ್ರಿಸುವಲ್ಲಿ ತಾಲೂಕು ಸಮಿತಿ ಎಲ್ಲ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಅಕ್ರಮ ಮರಳು ಸಾಗಾಟ ನಿಯಂತ್ರಣ ಕುರಿತು ಪ್ರತಿ ಸಭೆಯಲ್ಲಿ ವರದಿ ಸಲ್ಲಿಸಬೇಕು. ತಾಲೂಕು ಮರುಳು ನಿಯಂತ್ರಣ ಸಮಿತಿಯ ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿ ಚೆಕ್‌ಪೋಸ್ಟ್ ಉಸ್ತುವಾರಿ ವಹಿಸಲಾಗುತ್ತದೆ. ಮೆದಕಿನಾಳ-ತಲೇಖಾನ್ ಹಳ್ಳದ 15 ಎಕರೆಯಲ್ಲಿ ಮರುಳು ಬ್ಲಾಕ್ ಗುರುತಿಸುವ ಬಗ್ಗೆ ಜಿಲ್ಲಾ ಸಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅನುಮೋದನೆ ದೊರೆತ ನಂತರ ಟೆಂಡರ್ ಕರೆಯಲಾಗುವುದು. ಚೆಕ್‌ಪೋಸ್ಟ್‌ಗಳಿಗೆ ಶೀಘ್ರ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಲಿಂಗಸ್ಗೂರು ತಹಸೀಲ್ದಾರ್ ರಾಧ್ಯೇಶ್ಯಾಮ್, ಸಿಂಧನೂರು ತಹಸೀಲ್ದಾರ್ ಗಂಗಪ್ಪ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶರಣಬಸಪ್ಪ, ಲಿಂಗಸ್ಗೂರು, ಸಿಂಧನೂರು, ಮಸ್ಕಿ ಸರ್ಕಲ್ ಇನ್ಸ್‌ಪೆಕ್ಟರ್‌ಗಳು, ಹಾಗೂ ಸಿಂಧನೂರು ಮತ್ತು ಲಿಂಗಸ್ಗೂರು ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.