ಮುದಗಲ್: ಕೃಷ್ಣಾ ನದಿ ತೀರದಲ್ಲಿರುವ ಐತಿಹಾಸಿಕ ನವಲಿ ಜಡೆಶಂಕರಲಿಂಗ ದೇವಸ್ಥಾನ ನಾರಾಯಣಪುರ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗುವುದನ್ನು ತಪ್ಪಿಸಲು ತಡೆಗೋಡೆ ನಿರ್ಮಾಣಕ್ಕೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ 2 ಕೋಟಿ ಮಂಜೂರು ಮಾಡಿತ್ತು ಎಂದು ಜಗದೀಶ ಶೆಟ್ಟರ್ ಹೇಳಿದರು.
ನವಲಿ ಜಡೆಶಂಕರಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಕೂಡಲಸಂಗಮ ದೇವರ ರಕ್ಷಣೆ ಮಾದರಿಯಲ್ಲಿ ಈ ದೇವಸ್ಥಾನವನ್ನು ರಕ್ಷಣೆ ಮಾಡಲು ಉದ್ದೇಶ ಹೊಂದಲಾಗಿದೆ ಎಂದರು. ಇನ್ನು ಹೆಚ್ಚಿನ ಅನುದಾನ ನೀಡಿ ದೇವಸ್ಥಾನ ಜೀರ್ಣೋದ್ಧಾರ ಮತ್ತು ಪ್ರವಾಸಿಗರಿಗೆ ಅನುಕೂಲವಾಗುಂತೆ ಯಾತ್ರಾ ನಿವಾಸ, ಸಮುದಾಯ ಭವನಗಳನ್ನು ನಿರ್ಮಿಸಲು ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಹೇಳಿದರು.
ಲಿಂಗಸ್ಗೂರು ಶಾಸಕ ಮಾನಪ್ಪ ವಜ್ಜಲ್, ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ಟಿ.ಆರ್. ನಾಯಕ, ಸಿದ್ದು ಬಂಡಿ, ಗ್ರಾ.ಪಂ. ಅಧ್ಯಕ್ಷ ಬಸವರಾಜ, ಬಣಗಾರ ಸಮಾಜದ ರಾಜ್ಯ ಅಧ್ಯಕ್ಷ ಸುರೇಶ ಚನ್ನಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಶಿರಗಣ್ಣನವರ ಇದ್ದರು.
Advertisement