ರಾಯಚೂರು

ಶೈಕ್ಷಣಿಕ ಪ್ರಗತಿಯಲ್ಲಿ ಮಠಗಳ ಪಾತ್ರ ಅಪಾರ: ನಾಯಕ

Published On :

ಕ.ಪ್ರ. ವಾರ್ತೆ   ದೇವದುರ್ಗ್ಣ ಫೆ.3
ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಠ- ಮಾನ್ಯಗಳು ಪ್ರಮುಖ ಪಾತ್ರ ವಹಿಸುವ ಮೂಲಕ ಸಮಾಜದ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ಅಂಥ ಮಠಗಳನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸುವುದು ಸರಿಯಲ್ಲ ಎಂದು ಮಾಜಿ ಸಚಿವ ಶಿವನಗೌಡ ನಾಯಕ ಆಕ್ಷೇಪಿಸಿದರು.
ತಾಲೂಕಿನ ದೇವರಗುಂಡಗುರ್ತಿಯಲ್ಲಿ ಸೋಮವಾರ ಆಯೋಜಿಸಿದ್ದ ಮೈಲಾರಲಿಂಗ ಮೂರ್ತಿ ಪ್ರತಿಷ್ಠಾಪನೆ ಹಾಗೂ 101 ಜೋಡಿ ಸಾಮೂಹಿಕ ವಿವಾಹ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ವರಿಗೂ ಶಿಕ್ಷಣ ನೀಡಲು ಮಠಗಳು ಶ್ರಮಿಸುತ್ತಿವೆ. ಸರ್ಕಾರದಿಂದಾಗದ ಕಾರ್ಯವನ್ನು ಮಠಗಳು ಮಾಡಿವೆ. ಅಂಥ ಮಠಗಳ ಸ್ವಾಧೀನ ಮಾಡಿಕೊಳ್ಳುವ ಚಿಂತನೆ ಮಾಡುವುದೂ ತಪ್ಪಾದೀತು ಎಂದು ಎಚ್ಚರಿಸಿದರು.
ಈ ವೇಳೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ತಿಪ್ಪರಾಜು ಹವಾಲ್ದಾರ ಮಾತನಾಡಿದರು. ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ್, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ, ಲಿಂಗಸ್ಗೂರಿನ ಮುಖಂಡ ಸಿದ್ದುಬಂಡಿ, ಜಿಪಂ ಉಪಾಧ್ಯಕ್ಷ ಕೆ.ಶರಣಪ್ಪ, ಜಿಪಂ ಸದಸ್ಯ ಪ್ರಕಾಶ ಪಾಟೀಲ್, ಚಂದ್ರಶೇಖರ ಪಾಟೀಲ್ ಜಾಡ್ಲದಿನ್ನಿ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಮಲ್ಲಣ್ಣ ಗೌಡ, ಪುರಸಭೆ ಅಧ್ಯಕ್ಷ ಫಕ್ರೋದ್ದೀನ್, ನವೀನ್ ಆಸ್ಪತ್ರೆಯ ಡಾ. ಕೆ.ರಾಮಪ್ಪ, ಕೆ.ಉಣ್ಣೆ ಮಲ್ಲಪ್ಪ, ಚನ್ನೂರಿನ ಜಿಪಂ ಮಾಜಿ ಸದಸ್ಯ ಶ್ರೀನಿವಾಸರೆಡ್ಡಿ, ಜಿ.ಭೀಮರಡ್ಡಿ, ಬಿಜೆಪಿ ತಾಲೂಕಾಧ್ಯಕ್ಷ ಜಂಬಣ್ಣ ನೀಲೋಗಲ್ ಸೇರಿ ಅನೇಕರಿದ್ದರು.
ಮಾತಿನ ಚಕಮಕಿ: ಧಾರ್ಮಿಕ ಸಮಾರಂಭದಲ್ಲಿ ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರು ರಾಜ್ಯ ಸರ್ಕಾರವನ್ನು ಟೀಕಿಸಿದ್ದನ್ನು ಆಕ್ಷೇಪಿಸಿ ಯಾದಗಿರಿ ಜಿಲ್ಲೆಯ ಶರಣಪ್ಪ ಎಂಬುವವರು ಆಕ್ಷೇಪಿಸಿದ್ದಕ್ಕೆ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಧಾರ್ಮಿಕ ಸಭೆಯಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ ಎಂದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಶರಣಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರೆ, ವೇದಿಕೆ ಮೇಲಿದ್ದ ಜಿಪಂ ಉಪಾಧ್ಯಕ್ಷ ಕೆ.ಶರಣಪ್ಪ, ಮಧ್ಯ ಪ್ರವೇಶಿಸಿ ಧಾರ್ಮಿಕ ಕಾರ್ಯಕ್ರಮ ಇರುವುದರಿಂದ ರಾಜಕೀಯ ಭಾಷಣ ಬೇಡವೆಂದು ಹೇಳಿದ್ದು ತಪ್ಪಲ್ಲ ಎಂದು ಸಮಾಧಾನಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.