ಅಪಹರಣ; 3 ವರ್ಷ ಜೈಲು
ರಾಯಚೂರು: ಸಿಂಧನೂರು ತಾಲೂಕಿನ ಸಿದ್ರಾಂಪುರ ಗ್ರಾಮದಲ್ಲಿ ಮಹಿಳೆಯೊಬ್ಬಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಇಲ್ಲಿನ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
ಗ್ರಾಮದ ನಿವಾಸಿ ವೀರನಗೌಡ ಎಂಬುವವರ ಪುತ್ರಿ ನೇತ್ರಾವತಿ ಎಂಬಾಕೆಯನ್ನು 2012ರ ಮೇ 11ರಂದು ಅದೇ ಗ್ರಾಮದ ಆರೋಪಿ ಮಹಾಂತೇಶ್ ಎಂಬಾತ ಆಕೆ ಕಾಲೇಜಿಗೆ ತೆರಳುತ್ತಿರುವ ವೇಳೆ ಅಪಹರಿಸಿಕೊಂಡು ಹೋಗಿದ್ದು ಆ ಬಗ್ಗೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪಿಎಸ್‌ಐ ಕರುಣೇಶಗೌಡ ಅವರು ಆರೋಪಿತ ಮಹಾಂತೇಶನ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಸಲ್ಲಿಸಿದ್ದರು. ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿದ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಪಿ.ಜಿ.ಎಂ. ಪಾಟೀಲ್ ಅವರು ಆರೋಪಿ ಮಹಾಂತೇಶಗೆ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 7 ಸಾವಿರ ರು. ದಂಡ ವಿಧಿಸಿದ್ದಾರೆ.
ದಂಡದಲ್ಲಿ 5 ಸಾವಿರ ರು.ಗಳನ್ನು ನೊಂದ ಮಹಿಳೆಗೆ ಪಾವತಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ. ದಂಡ ತೆರಲು ವಿಫಲನಾದರೆ ಇನ್ನು 6 ತಿಂಗಳು ಹೆಚ್ಚುವರಿ ಕಾರಾಗೃಹ ಶಿಕ್ಷೆಯನ್ನು ಅನುಭವಿಸಲು ಸಹ ಆದೇಶದಲ್ಲಿ ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ಸಾರ್ವಜನಿಕ ಅಭಿಯೋಜಕ ಬಿ. ರಂಗಯ್ಯ ವಾದ ಮಂಡಿಸಿದ್ದರು.
ಡೆಂಘೀ ಜಾಗೃತಿ ಜಾಥಾ
ಸಿಂಧನೂರು: ಮನೆಯಲ್ಲಿ ಬಳಕೆಗಾಗಿ ನೀರು ತುಂಬುವ ಡ್ರಮ್, ಬ್ಯಾರಲ್, ಕಲ್ಲಿನ ಡೋಣಿ ಮುಂತಾದವುಗಳನ್ನು ವಾರದಲ್ಲಿ ಎರಡು ಬಾರಿ ಸ್ವಚ್ಛಗೊಳಿಸಿ ನೀರು ತುಂಬುವುದರಿಂದ ಸೊಳ್ಳೆಗಳ ಉತ್ಪತ್ತಿ ತಡೆಯುವುದರ ಜೊತೆಗೆ ಡೆಂಘೀ ಸೇರಿದಂತೆ ಸೊಳ್ಳೆಯಿಂದ ಹರಡುವ ಇತರ ರೋಗಗಳನ್ನು ನಿಯಂತ್ರಿಸಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ. ಪ್ರಶಾಂತ ಹೇಳಿದರು. ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಶಂಕಿತ ಜ್ವರ ಪ್ರಕರಣಗಳ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಡೆಂಘೀ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ಎಚ್.ದಾಸಪ್ಪನವರ ಮಾತನಾಡಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಸವರಾಜ, ಪ್ರೌಢಶಾಲಾ ಮುಖ್ಯಗುರು ಪ್ರವೀಣಕುಮಾರಿ, ಪ್ರಾಥಮಿಕ ಶಾಲಾ ಮುಖ್ಯಗುರು ಎಂ.ಬಿ. ದೊಡ್ಡಮನಿ, ಎಲ್.ಹೆಚ್.ವಿ. ಆನಂದಬಾಯಿ ಪಾಟೀಲ್, ಮಲೇರಿಯಾ ತಾಂತ್ರಿಕ ಮೇಲ್ವಿಚಾರಕರಾದ ಎಫ್.ಎ ಹಣಗಿ, ಸರಸ್ವತಿ, ಪ್ರಯೋಗಶಾಲಾ ತಂತ್ರಜ್ಞೆ ಯಲ್ಲಮ್ಮ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

