ಅರೆಕಾಲಿಕ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆಗ್ರಹ
ಸುರಪುರ: ಪದವಿ ಮತ್ತು ಪಪೂ ಕಾಲೇಜಿನ ಅರೆಕಾಲಿಕೆ ಉಪನ್ಯಾಸಕರಿಗೆ ವೇತನ ಹೆಚ್ಚಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ತಾಲೂಕು ಘಟಕ ಶುಕ್ರವಾರ ತಹಸೀಲ್ ಕಚೇರಿಯ ಎದುರು ಪ್ರತಿಭಟನೆ ನಡೆಸಿತು.
ಎಬಿವಿಪಿ ಮುಖಂಡರು ಮಾತನಾಡಿ, ಈಗಾಗಲೇ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು ಅವರುಗಳಿಗೆ ತಿಂಗಳಿಗೆ 8-10 ಸಾವಿರ ರೂ. ವರೆಗೆ ವೇತನ ನೀಡುತ್ತಿದ್ದು ಅದು ಕೂಡಾ ಸಮಯಕ್ಕೆ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು. ಈಗಿನ ದುಬಾರಿ ಯುಗದಲ್ಲಿ ಬೆಲೆಗಳು ಗಗನಕ್ಕೇರಿದ್ದು ಸದ್ಯಕ್ಕೆ ನೀಡುತ್ತಿರುವ ಸಂಬಳ ಯಾವುದಕ್ಕೂ ಸಾಲುತ್ತಿಲ್ಲ. ಆದಕಾರಣ ವೇತನವನ್ನು ಪರಿಷ್ಕರಿಣೆಗೊಳಿಸಿ ತಿಂಗಳಿಗೆ 25 ಸಾವಿರ ರೂ. ನೀಡಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಇದಕ್ಕೆ ಸ್ಪಂದಿಸದಿದ್ದರೆ ಎಬಿವಿಪಿ ವಿದ್ಯಾರ್ಥಿಗಳಿಂದ ರಾಜ್ಯಾದ್ಯಂತ ಕಾಲೇಜುಗಳನ್ನು ಬಂದ್ ಮಾಡಲಾಗುವುದು ಹಾಗೂ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ನಂತರ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಎಬಿವಿಪಿ ಅಧ್ಯಕ್ಷ ಶರಣುನಾಯಕ, ನಗರ ಕಾರ್ಯದರ್ಶಿ ಗಂಗಾಧರನಾಯಕ ಹಾಗೂ ಉಪನ್ಯಾಸಕರಾದ ಉಪೇಂದ್ರನಾಯಕ, ಸಂದೀಪ ನಾಯಕ, ಶರಣುನಾಯಕ, ಕಾರ್ಯಕರ್ತರಾದ ಎಚ್.ಎಸ್.ನಾಯಕ, ಶ್ರೀರಾಮ ರಾಠೋಡ, ಸೀತಾರಾಮ ರಾಠೋದ, ರಾಘವೇಂದ್ರ, ಗಂಗಾಧರ ಪತ್ತಾರ, ಕುಮಾರ ಚಿಕ್ಕನಳ್ಳಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

