ಚನ್ನಬಸವ ಶಿವಯೋಗಿ ಜಾತ್ರಾ ಮಹೋತ್ಸವ
ಸಿಂಧನೂರು: ತಾಲೂಕಿನ ವಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಲಿ. ಚನ್ನಬಸವ ಶಿವಯೋಗಿಗಳ 31ನೇ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಬೆಳಗ್ಗೆಯಿಂದ ಚನ್ನಬಸವ ಶಿವಯೋಗಿಗಳ ಮೂರ್ತಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ರುದ್ರಾಭಿಷೇಕ, ಲಿಂಗದೀಕ್ಷೆಗಳು ನಡೆದವು. ಸಂಜೆ ಜನ ಸಾಗರವೇ ಸೇರಿತು. ಕೊಟ್ಟೂರು ಸಂಸ್ಥಾನ ಮಠದ ಸಂಗನಬಸವ ಮಹಾ ಸ್ವಾಮಿ ರಥೋತ್ಸವಕ್ಕೆ ಚಾಲನೆ ನೀಡಿದರು. ಸುಮಂಗಲೆಯರ ಕುಂಭ-ಕಳಸ, ಡೊಳ್ಳು, ನಂದಿಕೊಲು ಕುಣಿತ, ಭಜನೆ, ಮಂತ್ರ ಘೋಷಗಳೊಂದಿಗೆ ರಥೋತ್ಸವ ಜರುಗಿತು. ಲಿಂಗಸ್ಗೂರು, ಮಾನ್ವಿ, ದೇವದುರ್ಗ, ಸಿರಗುಪ್ಪಾ ಸೇರಿದಂತೆ ನೆರೆಯ ಆಂಧ್ರ ಪ್ರದೇಶದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಹೂ-ಹಣ್ಣು ಎಸೆದು ಶಿವಯೋಗಿಗಳ ಕೃಪಾಶೀರ್ವಾದಕ್ಕೆ ಪಾತ್ರರಾದರು.
ಈ ಸಂದರ್ಭದಲ್ಲಿ ಹಾರನಹಳ್ಳಿ ಕೊಡಿಮಠ ಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿ, ಸಂತೆಕೆಲ್ಲೂರು ಘನಮಠೇಶ್ವರ ಗುರುಬಸವ ಸ್ವಾಮೀಜಿ, ಚಿಕಲಪರ್ವಿ ವಿರೂಪಾಕ್ಷ ಸ್ವಾಮೀಜಿ, ಅಡವಿ ಅಮರೇಶ್ವರದ ಶಾಂತಮಲ್ಲ ಸ್ವಾಮೀಜಿ, ನಂದವಾಡಗಿ ಮಹಾಂತಲಿಂಗ ಸ್ವಾಮೀಜಿ, ಕಲ್ಮಠದ ಡಾ. ಶಿವಮೂರ್ತಿ ಸ್ವಾಮೀಜಿ, ಪಂಚಮ ಸಿದ್ದಲಿಂಗ ಸ್ವಾಮೀಜಿ, ಶ್ರೀಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ, ಯದ್ದಲದೊಡ್ಡಿ ಮಹಾಲಿಂಗ ಸ್ವಾಮಿ, ಸಿರಗುಪ್ಪಾದ ಚಂದ್ರಶೇಖರಯ್ಯ, ಮಾಜಿ ಶಾಸಕರಾದ ವೆಂಕಟರಾವ್ ನಾಡಗೌಡ, ಬಯ್ಯಾಪುರ ಅಮರೇಗೌಡ, ಕೆಜೆಪಿ ಮುಖಂಡ ರಾಜಶೇಖರ ಪಾಟೀಲ್, ಜಿ.ಪಂ. ಅಧ್ಯಕ್ಷೆ ಲಲಿತಮ್ಮ, ಸದಸ್ಯೆ ಶಾಂತಮ್ಮ, ಜಿ.ಪಂ. ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಕಾಂಗ್ರೆಸ್ ಮುಖಂಡ ಮಲ್ಲನಗೌಡ ಕನ್ನಾರಿ, ನಗರಸಭೆ ಮಾಜಿ ಅಧ್ಯಕ್ಷ ಶರಣಪ್ಪ ತೆಂಗಿನಕಾಯಿ, ಎಪಿಎಂಸಿ ಸದಸ್ಯ ಚನ್ನಬಸವ ಉಪ್ಪಳ, ಶರಣೇಗೌಡ ಗಿಣಿವಾರ, ಆರ್.ಸಿ. ಪಾಟೀಲ್, ರಾಜುಗೌಡ, ಗೋಪಾಲರೆಡ್ಡಿ ಸಿರಗುಪ್ಪಾ, ಹೊನ್ನನಗೌಡ ಬೆಳಗುರ್ಕಿ, ವೀರೇಶ ನೆಟೇಕಲ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

