ಅಂತರ್ಜಲ ಅಭಿವೃದ್ಧಿಗೆ ಪ್ರತ್ಯೇಕ ನಿರ್ದೇಶನಾಲಯ
ಲಿಂಗಸ್ಗೂರು: ಸರ್ಕಾರ ಅಂತರ್ಜಲ ನಿಯಂತ್ರಣ ಹಾಗೂ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರ್ಜಲ ವಿಭಾಗ ಪ್ರತ್ಯೇಕಿಸಿ ಅಂತರ್ಜಲ ನಿರ್ದೇಶನಾಲಯ ಸ್ಥಾಪಿಸಲಾಗುವುದೆಂದು ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಗುಲ್ಬರ್ಗ ಜಿಲ್ಲೆಯ ಜೇವರ್ಗಿಯಿಂದ ಇಲಕಲ್ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಸಚಿವರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯಕ್ಕೆ ಶನಿವಾರ ಸಂಜೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೆರೆಗಳ ನಿರ್ವಹಣೆ ಇಲ್ಲದೆ ಒತ್ತುವರಿಯಾದ ಕುರಿತು ದೂರುಗಳು ಬಂದಿವೆ. ಕೆರೆಗಳ ಸಂರಕ್ಷಣೆಗೆ ಮುಖ್ಯಮಂತ್ರಿಗಳು ಕೆರೆ ಪ್ರಾಧಿಕಾರ ರಚನೆ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಈ ಬಗ್ಗೆ ರೂಪು-ನಿಯಮ ತಯಾರಿಸಿ ಹೊಸ ಕರಡು ಮಸೂದೆ ಜಾರಿಗೆ ತರಲಾಗುವುದು. ಇದರಿಂದ ಜಿಪಂ, ಕಂದಾಯ ಹಾಗೂ ನೀರಾವರಿ ಇಲಾಖೆ ವ್ಯಾಪ್ತಿಯ ಸುಮಾರು 2500ಕ್ಕೂ ಅಧಿಕ ಕೆರೆಗಳು ಪ್ರಾಧಿಕಾರದಲ್ಲಿ ಬರಲಿವೆ ಎಂದರು.
1,115 ಕೋಟಿ ಅನುದಾನ ಲಭ್ಯ: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ಸೃಜನೆ ಹಾಗೂ ಸ್ಥಿರೀಕರಿಸುವ ಉದ್ದೇಶ ಹೊಂದಲಾಗಿದೆ. ಎಸ್‌ಸಿಪಿ, ಟಿಎಸ್‌ಪಿ, 4702, ಯೋಜನೆ, ಯೋಜನೇತರ ಯೋಜನೆಗಳಿಗೆ 1,115 ಕೋಟಿ ಅನುದಾನ ಲಭ್ಯವಿದೆ. ಜ.30 ರೊಳಗೆ ಖರ್ಚು ಮಾಡಲು ಸೂಚಿಸಲಾಗಿತ್ತು. ಕೆಲ ತಾಂತ್ರಿಕ ತೊಂದರೆಯಿಂದ ಸಾಧ್ಯವಾಗಿಲ್ಲ. ಮಾರ್ಚ್ ಅಂತ್ಯದೊಳಗೆ ಬಳಕೆ ಮಾಡಲಾಗುವುದು. ಕೇಂದ್ರದ ಎಐಬಿಪಿಯಿಂದ 286 ಕೋಟಿ ಮಂಜೂರಾಗಿದ್ದು, ಅಂತರ್ಜಲ ಹೆಚ್ಚಿಸಲು ಚೆಕ್ ಡ್ಯಾಂ, ಕೆರೆ ಹೂಳೆತ್ತಲು ರಾಯಚೂರು, ಕೊಪ್ಪಳ, ಬಾಗಲಕೋಟೆ, ಬಿಜಾಪುರ ಸೇರಿದಂತೆ ಜಿಲ್ಲೆಗಳನ್ನು ಸೇರಿಸಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ಸಿಂಧನೂರು, ಮಾನವಿ ಹೊರತು ಪಡಿಸಿ ಎಲ್ಲ ತಾಲೂಕುಗಳು ಯೋಜನೆ ವ್ಯಾಪ್ತಿಯಲ್ಲಿ ಬರಲಿವೆ.
ಸೋಲಾರ್ ವ್ಯವಸ್ಥೆ: ರಾಜ್ಯದ 11 ಜಿಲ್ಲೆ ಹೊರತುಪಡಿಸಿ ಬಿಸಿಲಿನ ತಾಪಮಾನ ಹೆಚ್ಚು ಇರುವ ಪ್ರದೇಶಗಳನ್ನು ಗುರುತಿಸಿ ರೈತರ ಪಂಪ್‌ಸೆಟ್‌ಗಳಿಗೆ ಸೋಲಾರ್ ವ್ಯವಸ್ಥೆ ಕಲ್ಪಿಸಲು ಎಸ್‌ಸಿಪಿ ಯೋಜನೆಯಡಿ 179 ಕೋಟಿ ಹಾಗೂ ಟಿಎಸ್‌ಪಿ ಯೋಜನೆಯಡಿ 68 ಕೋಟಿ ಸೇರಿ ಒಟ್ಟು 247 ಕೋಟಿ ಮಂಜೂರಾಗಿದೆ. ಪ್ರಾಯೋಗಿಕವಾಗಿ ಚಿತ್ರದುರ್ಗ ಸೇರಿ 2-3 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಯಶಸ್ವಿಯಾದರೆ ಯೋಜನೆ ವ್ಯಾಪ್ತಿಯ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು. ಇದರಿಂದ ವಿದ್ಯುತ್ ಮಿತವ್ಯಯಕ್ಕೆ ಅನುಕೂಲವಾಗಲಿದೆ. ಏಷಿಯನ್ ಅಭಿವೃದ್ಧಿ ಬ್ಯಾಂಕ್‌ನಿಂದ ಜಲಸಂವರ್ಧನ ಯೋಜನೆ ಆರಂಭಿಸಲು ಚರ್ಚಿಸಲಾಗಿದ್ದು, ಸರ್ಕಾರದಿಂದ ಅನುಮತಿ ದೊರೆತರೆ ಯೋಜನೆ ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್ ಕರಡಕಲ್, ಜಿಪಂ ಸದಸ್ಯ ಹೆಚ್.ಬಿ. ಮುರಾರಿ, ಮುಖಂಡರಾದ ಮಲ್ಲಣ್ಣ ವಾರದ, ಸೋಮಶೇಖರ ಐದನಾಳ, ಚೆನ್ನಾರಡ್ಡಿ ಬಿರಾದಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

