ರಾಯಚೂರು

ಹೆಚ್ಚೆಚ್ಚು ಕನ್ನಡ ಭಾಷೆ ಬಳಸಿ: ಚಿತ್ರನಟ ವೀರೇಶಗೌಡ ನಟೇಕಲ್

Published On :

ಸಿಂಧನೂರು: ಬೇರೆ ಬೇರೆ ಭಾಷೆಗಳನ್ನು ಕಲಿಯುವುದು ತಪ್ಪಲ್ಲ. ಆದರೆ ಮಾತೃಭಾಷೆ ಕನ್ನಡವನ್ನು ನಿತ್ಯ ಬದುಕಿನ ಪ್ರತಿ ಕ್ಷಣದಲ್ಲಿ ಹೇರಳವಾಗಿ ಬಳಸಬೇಕು. ಕನ್ನಡ ಭಾಷೆ ಎಲ್ಲ ರಂಗಗಳಲ್ಲಿ ಆಡಳಿತ ಭಾಷೆಯಾಗಿ ಹೊರಹೊಮ್ಮಬೇಕಾದರೆ ಎಲ್ಲರ ಸಹಕಾರ ಅಗತ್ಯವಿದೆ. ವಿದ್ಯಾರ್ಥಿಗಳು ಮಾತೃಭಾಷೆ ಕನ್ನಡಕ್ಕೆ ಕುತ್ತು ಬರದಂತೆ ಜಾಗೃತಿ ವಹಿಸಬೇಕೆಂದು ಚಿತ್ರನಟ ವೀರೇಶಗೌಡ ನಟೇಕಲ್ ಹೇಳಿದರು. ನಗರದ ಮೀನಾಕ್ಷಿ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸಿರಿಗಂಧ ಕನ್ನಡ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಗಮನಸೆಳೆದ ಪರಿಷತ್ ಕಾರ್ಯಕ್ರಮಗಳು: ಮೀನಾಕ್ಷಿ ಪಬ್ಲಿಕ್ ಶಾಲೆಯ ಆಡಳಿತಾಧಿಕಾರಿ ಚಂದ್ರಕಲಾ ಪ್ರಕಾಶ ಕಾರ್ಯಕ್ರಮ ಉದ್ಘಾಟಿಸಿ, ತಮ್ಮ ಶಾಲೆಯಲ್ಲಿ ಕನ್ನಡ ಭಾಷೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ವಿದ್ಯಾರ್ಥಿಗಳು ಹೆಚ್ಚಿನ ಒಲುವು ಹೊಂದಿದ್ದಾರೆ. ಸಿರಿಗಂಧ ಕನ್ನಡ ನಿರಂತರವಾಗಿ ನಡೆಸಿಕೊಂಡು ಬಂದಿರುವ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಗಮನ ಸೆಳೆದಿವೆ ಎಂದರು. ತಾಲೂಕು ಕಸಾಪನ ಅಧ್ಯಕ್ಷೆ ರಮಾದೇವಿ ಶಂಭೋಜಿ ಮಾತನಾಡಿ, ಸಿರಿಗಂಧ ಕನ್ನಡದ ಮಹತ್ವವನ್ನು ವಿವರಿಸಿದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬೀರಪ್ಪ ಶಂಭೋಜಿ, ಮುಖ್ಯಗುರು ಎಸ್.ಎಸ್. ಪಾಟೀಲ್ ಮಾತನಾಡಿದರು. ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಶ್ರೀಶೈಲ್ ಕೌದಿ, ವೀರೇಶ ಗೋನವಾರ, ಕನ್ನಡ ಶಿಕ್ಷಕಿ ಪದ್ಮಾವತಿ ಉಪಸ್ಥಿತರಿದ್ದರು. ಮೀನಾಕ್ಷಿ ಪಬ್ಲಿಕ್ ಶಾಲೆ ನಿರ್ದೇಶಕ ಪ್ರಕಾಶ ಝುಂಜರವಾಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.