ಜಿಪಂ ಕೆಡಿಪಿ ಸಭೆ ಮುಂದೂಡಿಕೆ
ರಾಯಚೂರು: ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಫೆ.11ರಂದು ನಡೆಯಬೇಕಿದ್ದ ಮಾಸಿಕ ಕೆಡಿಪಿ ಸಭೆಯನ್ನು ಫೆ.17ಕ್ಕೆ ಮುಂದೂಡಲಾಗಿದೆ. ಈ ಕುರಿತು ಜಿಪಂ ಸಿಇಒ ಪ್ರಕಟಣೆ ನೀಡಿದ್ದು, ಮಾಸಿಕ ಕೆಡಿಪಿ ಸಭೆಯನ್ನು ಕೆಲ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಫೆ.17ರಂದು ಬೆಳಗ್ಗೆ 11.30ಕ್ಕೆ ನಗರದ ಜಿಪಂ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ಲಲಿತಮ್ಮ ಲಿಂಗರಾಜು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಸಿಇಒ ವಿಜಯ ಜೋತ್ಸಾ ತಿಳಿಸಿದ್ದಾರೆ.
ಮದ್ಯ ನಿಷೇಧ
ರಾಯಚೂರು: ಮಾನವಿ ತಾಲೂಕಿನ ನೀರಮಾನವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆಯು ಫೆ.14ರಿಂದ 23ರ ವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರು, ಗ್ರಾಮದ ಜಾತ್ರೆ ಪ್ರದೇಶ ಮತ್ತು ಗ್ರಾಮ ವ್ಯಾಪ್ತಿಯಲ್ಲಿ ಫೆ.18ರ ಬೆಳಗಿನ 6ರಿಂದ ಫೆ.19ರ ಮಧ್ಯರಾತ್ರಿ ವರೆಗೆ ಮದ್ಯಪಾನ ಮತ್ತು ಮಾರಾಟ ನಿಷೇಧಿಸಿದ್ದು, ಈ ಅವಧಿಯಲ್ಲಿ ನಿರಮಾನವಿ ಗ್ರಾಮದ ಪ್ರದೇಶ ವ್ಯಾಪ್ತಿಯ ಎಲ್ಲ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಹೊರಗಿನಿಂದ ಗ್ರಾಮದೊಳಕ್ಕೆ ಮದ್ಯ ತಂದು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿದ್ದಾರೆ.
ಶಿಕ್ಷಕರ ಬಡ್ತಿಗೆ ತಡೆ
ರಾಯಚೂರು: ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮುಖ್ಯಗುರುಗಳ ಹುದ್ದೆಗೆ ಬಡ್ತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಡಿಡಿಪಿಐ ತಾತ್ಕಾಲಿಕವಾಗಿ ತಡೆ ಹಿಡಿದಿದ್ದಾರೆ. ಈಚೆಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಿಗೆ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯ ಗುರುಗಳ ಹುದ್ದೆಗೆ ಮತ್ತು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯಗುರುಗಳ ಹುದ್ದೆಗೆ ಕೌನ್ಸಿಲಿಂಗ್ ನಡೆಸಿ ನೀಡಿದ್ದ ಬಡ್ಡಿಯ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಡಿಡಿಪಿಐ ರಾಮಾಂಜನೇಯ ತಿಳಿಸಿದ್ದಾರೆ.
ಅಪರಿಚಿತ ಶವ ಪತ್ತೆ
ರಾಯಚೂರು: ಸಿಂಧನೂರು ತಾಲೂಕಿನ ಬೂದಿವಾಳ ಕ್ಯಾಂಪಿನ ಬಳಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ಗಂಡಸು ಸುಮಾರು 60 ರಿಂದ 65 ವರ್ಷಯಸ್ಸಿನವರಾಗಿದ್ದು, ಇವರ ಶವ ಕಾಲುವೆಯ ನೀರಿನಲ್ಲಿ ತೇಲಿ ಬಂದಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ಪೊಲೀಸರಿಗೆ ದೂರಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

