ಇಂದು ವಾರ್ಷಿಕ ಸ್ನೇಹ ಸಮ್ಮೇಳನ
ಸಿಂಧನೂರು: ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಫೆ.11ರಂದು ಬೆ.10 ಗಂಟೆಗೆ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ ಸಮಾರಂಭ ಏರ್ಪಡಿಸಲಾಗಿದೆ. ಕನಕಗಿರಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಉತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಡಾ. ಡಿ.ಕೆ. ಮಾಳೆ ಮುಖ್ಯಭಾಷಣಕಾರರಾಗಿ ಆಗಮಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಅಂಬಾಮಠ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಬಸಪ್ಪ ಹೊಸಮನಿ ಪಾಲ್ಗೊಳ್ಳುವರು. ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಚಾರ್ಯ ಎಸ್. ಶಿವರಾಜ್ ವಹಿಸುವರು. ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಚ್.ಮಲ್ಲಿಕಾರ್ಜುನಗೌಡ, ಪ್ರೌಢಶಾಲಾ ಅ.ಸ. ಉಪಾಧ್ಯಕ್ಷ ನಾಸೀರಸಾಬ್ ಇನ್ನಿತರ ಸದಸ್ಯರು ಭಾಗವಹಿಸುವರು ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
ಅನಿರ್ದಿಷ್ಟಾವಧಿ ಧರಣಿ 17ರಿಂದ
ರಾಯಚೂರು: ಗ್ರಾಮ ಪಂಚಾಯಿತಿ ನೌಕರರ ಅನುಮೋದನೆ, ಹೊಸ ಹಾಗೂ ಬಾಕಿ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ. 17ರಿಂದ ಗ್ರಾಪಂ ನೌಕರರ ಸಂಘ ಅನಿರ್ದಿಷ್ಟಾವಧಿ ಧರಣಿ ನಡೆಸಲಿದೆ. ಈ ಕುರಿತು ಸಂಘದ ಪದಾಧಿಕಾರಿಗಳು ಜಿಪಂ ಸಿಇಒಗೆ ಸೋಮವಾರ ದೂರು ಸಲ್ಲಿಸಿ, ಹೊಸದಾಗಿ ವೇತನ ನೀಡಿಕೆ ಮತ್ತು ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು. ಗ್ರಾಪಂ ನೌಕರರ ಅನುಮೋದನೆ ಮಾಡಬೇಕು. 2013- 14ನೇ ಸಾಲಿನ ಶಾಸನಬದ್ಧ ಅನುದಾನ ಬಿಡುಗಡೆ ಮತ್ತು ಇನ್ನಿತರೆ ಬೇಡಿಕೆಗಳನ್ನು ಕೂಡಲೇ ಜಿಪಂ ಈಡೇರಿಸದಿದ್ದರೆ ಫೆ.17ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದೆ.
ಆರೋಗ್ಯ ತಪಾಸಣೆ
ದೇವದುರ್ಗ: ವಾಜಪೇಯಿ ಆರೋಗ್ಯಶ್ರೀ ಯೋಜನೆ ಅಡಿ ಹೈದ್ರಾಬಾದ್ ಮೂಲದ ಕೇರ್ ಆಸ್ಪತ್ರೆಯ ನುರಿತ ಹೃದ್ರೋಗ ತಜ್ಞ ಡಾ. ರಾಘವೇಂದ್ರ ಹಾಗೂ ನರರೋಗ ತಜ್ಞ ಡಾ. ವೆಂಕಟ್ ಅವರು ಸೋಮವಾರ ರೋಗಿಗಳ ಆರೋಗ್ಯದ ತಪಾಸಣೆ ನಡೆಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಾಜಪೇಯಿ ಆರೋಗ್ಯಶ್ರೀ ಶಿಬಿರದಲ್ಲಿ 143 ರೋಗಿಗಳು ತಪಾಸಣೆಗೊಳಗಾದರು. ಈ ಪೈಕಿ 8 ಜನ ಹೃದ್ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಶಿಫಾರಸು ಮಾಡಲಾಯಿತು. ನರರೋಗ ಕಾಯಿಲೆಯಿಂದ ಇಬ್ಬರಿಗೆ ಹಾಗೂ ಕ್ಯಾನ್ಸರ್ನಿಂದ ಒಬ್ಬ ರೋಗಿ ಬಳಲುತ್ತಿರುವುದು ಪತ್ತೆಯಾಗಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗುತ್ತದೆ ಎಂದು ವಾಜಪೇಯಿ ಆರೋಗ್ಯಶ್ರೀ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ವಿ. ರಾಜೇಶ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

