ರಾಯಚೂರು

ಸಮ್ಮೇಳನಕ್ಕೆ ಸಕಲ ಸಿದ್ಧತೆ

Published On :

ಲಿಂಗಸ್ಗೂರು: ನಾಡಿನ ಸಾಹಿತ್ಯಾಸಕ್ತರ ಕನ್ನಡದ ನುಡಿ ಮುತ್ತುಗಳ ಸವಿ ಊಟ ಬಡಿಸಲು ವೇದಿಕೆ ಬಹುತೇಕ ಸಜ್ಜಾಗಿದೆ. ಸಮ್ಮೇಳನ ಅದ್ಧೂರಿಯಾಗಿ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಮಹಾಂತೇಶ ಪಾಟೀಲ್ ಹೇಳಿದರು.
ತಾಲೂಕಿನ ಮಸ್ಕಿ ಪಟ್ಟಣದ ಸಮ್ಮೇಳನ ವೇದಿಕೆಯಲ್ಲಿ ಮಾತನಾಡಿ, ಸಮ್ಮೇಳನಕ್ಕಾಗಿ ಈಗಾಗಲೇ ಸ್ವಾಗತ, ನೋಂದಣಿ, ವಸತಿ, ಆಹಾರ, ಸಾರಿಗೆ ಮತ್ತು ಅತಿಥಿ ಸತ್ಕಾರ, ಶಿಸ್ತುಪಾಲನಾ, ವಿದ್ಯುತ್ ನಿರ್ವಹಣೆ, ನೈರ್ಮಲ್ಯ, ಸಾಂಸ್ಕೃತಿಕ ವೇದಿಕೆ, ಪ್ರಚಾರ, ಮೆರವಣಿಗೆ, ಚಿತ್ರಕಲಾ ಪ್ರದರ್ಶನ ಮತ್ತು ಪುಸ್ತಕ ಮಳಿಗೆಗಳಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಗಮನ ಹರಿಸದೆ, ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ರಾಯಚೂರು ಜಿಲ್ಲೆಯ ಜನಪರವಾಗಿ ಧ್ವನಿ ಎತ್ತುವ ನಿಟ್ಟಿನಲ್ಲಿ ಮೂಲ ಸೌಕರ್ಯ, ಅಭಿವೃದ್ಧಿ ಆದ್ಯತೆ ಕುರಿತು 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜರುಗುವ ವಿವಿಧ ಗೋಷ್ಠಿಗಳಲ್ಲಿ ನಿರ್ಧರಿಸಿದಂತೆ ಗೊತ್ತುವಳಿ ಮಂಡಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಸಾಹಿತ್ಯಾಸಕ್ತರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು.
ಜಿಪಂ ಸದಸ್ಯ ಎಚ್.ಬಿ. ಮುರಾರಿ ಮಾತನಾಡಿ, 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಸ್ಕಿಯಲ್ಲಿ ನಡೆಯಲಿರುವುದು ಲಿಂಗಸ್ಗೂರು ತಾಲೂಕಿಗೆ ಹಮ್ಮೆಯ ವಿಷಯವಾಗಿದೆ. ಈ ಭಾಗದ ಸಾಹಿತ್ಯ ಮತ್ತು ಸಂಸ್ಕೃತಿಗೆ ಮೆರಗು ತರಲಿದೆ. ನಾಗರಿಕರು ಮತ್ತು ಯುವಕರಿಗೆ ಸಾಹಿತ್ಯದ ಸವಿರುಚಿ ಉಣ ಬಡಿಸಿದಂತಾಗಲಿದೆ. ಸಾಹಿತ್ಯ ಕ್ಷೇತ್ರದ ಬಗ್ಗೆ ವೈಜ್ಞಾನಿಕವಾಗಿ ಚಿಂತನೆ ಮಾಡಲು ಅನುಕೂಲವಾಗಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.