ರಾಯಚೂರು

'ತಿದ್ದುಪಡಿಗೆ ನೀರಾವರಿ ಕಾರ್ಯದರ್ಶಿ ಸಿದ್ಧತೆ'

Published On :

ಕಾರಟಗಿ: ರಾಜ್ಯದ ರೈತರ ಹಿತಾಸಕ್ತಿ ಹಾಗೂ ಭವಿಷ್ಯದ ದೃಷ್ಟಿಯಿಂದ ಜಂಟಿ ನೀರಾವರಿ ಯೋಜನೆ ತುಂಗಭದ್ರಾ ಅಣೆಕಟ್ಟಿಗೆ ಸಂಬಂಧಿಸಿದಂತೆ ಕೆಲವು ಅಂಶಗಳಿಗೆ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದ್ದು, ನೀರಾವರಿ ಕಾರ್ಯದರ್ಶಿ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ ಎಂದು ಸಿಂಧನೂರು ಶಾಕರ ಬಾದರ್ಲಿ ಹಂಪನಗೌಡ ತಿಳಿಸಿದರು. ಪಟ್ಟಣದಲ್ಲಿ ಸಿದ್ಧೇಶ್ವರ ಸ್ವಾಮೀಜಿ ಅವರ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು, ಇಲ್ಲಿನ ರತ್ನಗಿರಿ ಪರ್ವತದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಅಣೆಕಟ್ಟು ಹಾಗೂ ಬಹುತೇಕ ಕಾಲುವೆಗಳು ನಮ್ಮ ರಾಜದಲ್ಲಿದ್ದರೂ ನೀರಿನ ಮೇಲೆ ಆಂಧ್ರ ಪ್ರದೇಶದ ಹಿಡಿತವಿದೆ. ತುಂಗಭದ್ರಾ ಮಂಡಳಿಯಲ್ಲಿ ಆಂಧ್ರ ಅಧಿಕಾರಿಗಳೇ ತುಂಬಿದ್ದಾರೆ. ರಾಜ್ಯದ ರೈತರಿಗೆ ಸರಿಯಾಗಿ ನೀರು ಸಿಗದಿರಲು ಇದೂ ಒಂದು ಕಾರಣ ಎಂದರು. ಫೆ.7ರಂದು ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜನಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಅಣೆಕಟ್ಟೆ ಹಾಗೂ ನೀರಿನ ಸಮಸ್ಯೆ ಕುರಿತು ವಿವರಿಸಲಾಗಿದೆ. ಕೆಲವು ವರ್ಷಗಳಿಂದ ಅಣೆಕಟ್ಟೆಯಲ್ಲಿ ನೀರಿನ ಲೆಕ್ಕವನ್ನು ತಪ್ಪಾಗಿ ಕೊಡಲಾಗುತ್ತಿದೆ. ನೆಗೆಟಿವ್ ಇನ್‌ಫ್ಲೋ ತೋರಿಸಿ, ಆಂಧ್ರ ಪ್ರದೇಶ 8ರಿಂದ 11 ಟಿಎಂಸಿ ನೀರು ನುಂಗುತ್ತಿದೆ ಎಂದು ಬಾದರ್ಲಿ ಆತಂಕ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.