ನಾಳೆ 'ಮನುಷ್ಯ ಜಾತಿ ತಾನೊಂದೇ ವಲಂ' ಧ್ವನಿ- ಬೆಳಕು ಕಾರ್ಯಕ್ರಮ
ರಾಯಚೂರು: ರಾಜ್ಯ ವಾರ್ತಾ ಇಲಾಖೆಯಿಂದ ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಫೆ.14ರಂದು 'ಮನುಷ್ಯ ಜಾತಿ ತಾನೊಂದೇ ವಲಂ' ಧ್ವನಿ- ಬೆಳಕು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಟಿ. ಕನುಮಪ್ಪ ಹೇಳಿದರು.
ನಗರದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಸಂಜೆ 6.30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವನಿ- ಬೆಳಕು ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮವು ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ ಅವರ ಪರಿಕಲ್ಪನೆಯಾಗಿದೆ ಎಂದು ಹೇಳಿದರು.
ಕೋಟಗಾನಹಳ್ಳಿ ರಾಮಯ್ಯ ಅವರ ಸಾಹಿತ್ಯ ರಚನೆ, ಲಕ್ಷ್ಮೀಪತಿ ಕೋಲಾರ ಅವರ ಗೀತ ರಚನೆ, ಡಾ. ಕೆ.ವೈ. ನಾರಾಯಣಸ್ವಾಮಿ ಅವರ ಸಾಹಿತ್ಯ, ಹಂಸಲೇಖ ಅವರ ಸಂಗೀತ ನಿರ್ದೇಶನ, ಶಶಿಧರ ಅಡಪ ಅವರ ರಂಗ ವಿನ್ಯಾಸದಲ್ಲಿ ಧ್ವನಿ- ಬೆಳಕು ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ವರ್ತಮಾನಕ್ಕೆ ಮರುಪೂರಣ: ಖ್ಯಾತ ರಂಗ ನಿರ್ದೇಶಕ ಸಿ. ಬಸಲಿಂಗಯ್ಯ ಅವರ ನಿರ್ದೇಶನದಲ್ಲಿ ಪ್ರದರ್ಶನ ನಡೆಯಲಿದ್ದು, ಒಟ್ಟು 175 ಜನ ಯುವ ಕಲಾವಿದರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾಮಾಜಿಕ ಅನಿಷ್ಠವೆನಿಸಿರುವ ಜಾತಿ ಪದ್ಧತಿಯ ವಿರುದ್ಧ ಆದಿ ಕಾಲದಿಂದಲೂ ನಮ್ಮ ನೆಲದಲ್ಲಿ ಹೋರಾಟ ಪ್ರತಿಭಟನೆಗಳು ನಡೆಯುತ್ತಲೇ ಬಂದಿವೆ. ಇದಕ್ಕೆ ನಮ್ಮ ಸಂಸ್ಕೃತಿ, ಚರಿತ್ರೆಯಲ್ಲಿ ಸಾಕಷ್ಟು ಪುರಾವೆಗಳಿವೆ. ವಿವಿಧ ಕಾಲಘಟ್ಟಗಳಲ್ಲಿ ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಮುಂತಾದ ಸಮಾಜ ಸುಧಾರಕರು ಈ ಜಾತಿಯೆಂ, ಜಾತಿ ಪೆಡಂಭೂತವನ್ನು ಮಣಿಸಲು ತಮ್ಮದೇ ಹಾದಿಯಲ್ಲಿ ಹೋರಾಡಿದ್ದಾರೆ. ಅಂಥ ಜಾತಿ ಪದ್ಧತಿ ವಿರೋಧಿ ವಿಷಯವನ್ನು ಕಾರ್ಯಕ್ರಮ ಒಳಗೊಂಡಿದೆ ಎಂದು ತಿಳಿಸಿದರು.
ಸರ್ವರೂ ಜಾತಿ, ಮತ ತೊರೆದು ಒಂದುಗೂಡಬೇಕೆನ್ನುವ ಸಾಮಾಜಿಕ ವಿವೇಕವನ್ನು ವರ್ತಮಾನಕ್ಕೆ ಮರುಪೂರಣ ಮಾಡುವ ಆಶಯವನ್ನು ಸಹ ಹೊಂದಿದೆ. ಕಲಾವಿದರಿಗೆ ವಸತಿ ಊಟದ ವ್ಯವಸ್ಥೆಯನ್ನು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಾಡಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಪಂ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸಿಬ್ಬಂದಿ ರಮಾಕಾಂತ ಕುಲಕರ್ಣಿ, ಹಿರಿಯ ಪತ್ರಕರ್ತ ಕೆ. ರಾಮಕೃಷ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

