ರಾಯಚೂರು

ಪ್ಲಾಸ್ಟಿಕ್ ಹಟಾವೋ...ಗೆ ಚಾಲನೆ

Published On :

ರಾಯಚೂರು: ನಗರದಲ್ಲಿ ಶುಕ್ರವಾರ ಜಾಗೋ ರಾಯಚೂರು ಜಾಗೋ ಸಂಘಟನೆಯಿಂದ ಪ್ಲಾಸ್ಟಿಕ್ ಬಳಕೆ ನಿಷೇಧಿಸುವಂತೆ ಒತ್ತಾಯಿಸಿ ಏರ್ಪಡಿಸಿದ್ದ ಪ್ಲಾಸ್ಟಿಕ್ ಹಟಾವೋ ಪರಿಸರ ಬಚಾವೋ ಆಂದೋಲನಕ್ಕೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಚಾಲನೆ ನೀಡಿದರು.
ಇಲ್ಲಿನ ಚಂದಮೌಳೇಶ್ವರ ವೃತ್ತದಲ್ಲಿ ಆಂದೋಲನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ನಗರದ ಜನತೆ ಪ್ಲಾಸ್ಟಿಕ್ ಬಳಕೆಯನ್ನು ತಡೆದು ಪರಿಸರ ಸಂರಕ್ಷಣೆ ಕ್ರಮಗಳಿಗೆ ನೆರವಾಗುವಂತೆ ಮನವಿ ಮಾಡಿ ಇತ್ತೀಚೆಗೆ ಮಲಿಯಾಬಾದ್ ಗೋಶಾಲೆಯಲ್ಲಿ ಗೋವುಗಳ ಸಾವಿಗೆ ಪ್ಲಾಸ್ಟಿಕ್ ಚೀಲಗಳ ಸೇವನೆಯೇ ಕಾರಣ ಎಂಬುದು ಪತ್ತೆಯಾಗಿದೆ. ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪ್ಲಾಸ್ಟಿಕ್ ಪರಿಸರಕ್ಕೆ ಅಪಾಯಕಾರಿಯಾಗಿದೆ. ಬಳಸಿ ಬಿಸಾಡಿದ ಪ್ಲಾಸ್ಟಿಕ್ ಬೇಗ ಕೊಳೆಯುವುದಿಲ್ಲ. ಹಾಗಾಗಿ ಪ್ಲಾಸ್ಟಿಕ್ ಚೀಲಗಳನ್ನು ಬೇಕಾಬಿಟ್ಟು ಬಿಸಾಡುವುದರಿಂದ ಪರಿಸರಕ್ಕೆ ಅಪಾಯ ತಪ್ಪಿದಲ್ಲ. ಹಾಗೆಯೇ ಜಾನುವಾರುಗಳ ಅದರ ಸೇವನೆಯಿಂದ ಸಾವಿಗೀಡಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ನಗರದ ಜನತೆ ಪ್ಲಾಸ್ಟಿಕ್ ಚೀಲಗಳ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೂಡಲೇ ಮುಂದಾಗಬೇಕು. ಆ ಮೂಲಕ ಆಡಳಿತಕ್ಕೆ ಪರಿಸರ ರಕ್ಷಣೆ ಕೈಗೊಳ್ಳುವಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.
ಪ್ರಮುಖರಾದ ಕಿರಣ್ ಕುಮಾರ್, ಜಂಬುನಾಥ ಯಾದವ್, ರಾಜೇಶ್ ರಾಜಲಬಂಡಿ, ರಾಜೇಂದ್ರಕುಮಾರ್ ಹರವಿ, ರವಿಕುಮಾರ್, ಸಂದೀಪ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.