ರಾಯಚೂರು

ದೇಶಿ ಸಂಸ್ಕೃತಿ ಉಳಿಸಿ ಬೆಳೆಸಿ; ಡಾ. ಶಕುಂತಲಾ ಶೆಟ್ಟಿ

Published On :

ಸಿಂಧನೂರು: ದೃಶ್ಯ ಮಾಧ್ಯಮಗಳ ಪ್ರಭಾವದಿಂದ ನಾವೇ ನಮ್ಮ ಸಂಸ್ಕೃತಿ ತ್ಯಜಿಸಿ ಪರಕೀಯ ಸಂಸ್ಕೃತಿಗೆ ಮಾರುಹೋಗುತ್ತಿರುವುದು ಅತ್ಯಂತ ಖೇದಕರ. ಯುವ ಪೀಳಿಗೆ ತಮ್ಮ ಜವಾಬ್ದಾರಿ ಮರೆತು ದುಶ್ಚಟಗಳಿಗೆ ಬಲಿಯಾಗದೆ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕೆಂದು ರಾಯಚೂರಿನ ಎಸ್‌ಎಸ್‌ಆರ್‌ಜಿ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಶಕುಂತಲಾ ಶೆಟ್ಟಿ ಸಲಹೆ ನೀಡಿದರು.
ನಗರದ ಸಂಕೇತ ಸ್ವತಂತ್ರ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 10ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಶೈಕ್ಷಣಿಕ ವ್ಯವಸ್ಥೆಯು ವ್ಯಾಪಾರೀಕರಣದ ರೂಪ ತಾಳಿ ತನ್ನ ನೈಜ ಅರ್ಥವನ್ನೇ ಕಳೆದುಕೊಂಡಿರುವುದು ವಿಷಾದನೀಯ. ನಮ್ಮ ಶಿಕ್ಷಣ ಮನುಷ್ಯನ ಸಚ್ಚಾರಿತ್ರ್ಯ ನಿರ್ಮಾಣಕ್ಕೆ ಬಳಕೆಯಾಗಬೇಕೇ ವಿನಃ ಕೇವಲ ಪ್ರಮಾಣಪತ್ರ ಪಡೆಯಲು, ಉದ್ಯೋಗ ಗಿಟ್ಟಿಸಿಕೊಳ್ಳಲು ಸೀಮಿತವಾಗಬಾರದೆಂದು ಅಭಿಪ್ರಾಯಪಟ್ಟರು.
ಜ್ಞಾನ, ಕೌಶಲ್ಯ ಹೆಚ್ಚಿಸಿಕೊಳ್ಳಿ: ಲಿಂಗಸ್ಗೂರು ವಿಸಿಬಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಜಿ.ವಿ. ಕೆಂಚನಗುಡ್ಡ ಮಾತನಾಡಿ, ಶಿಕ್ಷಣ ಬೆಳೆದಂತೆ ಎಲ್ಲ ರಂಗಗಳಲ್ಲಿಯೂ ಸ್ಪರ್ಧಾ ಮನೋಭಾವ ಹೆಚ್ಚುತ್ತಿದ್ದು ಸತತ ಅಭ್ಯಾಸ ಮಾಡಿ ಜ್ಞಾನ, ಸಾಮರ್ಥ್ಯ, ಕೌಶಲ್ಯ ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಕೇತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಬಸವರಾಜ ಮಾತನಾಡಿ, ಹೈ-ಕ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸಂಸ್ಥೆಯನ್ನು ಹುಟ್ಟು ಹಾಕಲಾಗಿದೆ. ಪ್ರತಿ ವರ್ಷವೂ 50 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು ಕಠಿಣ ಶ್ರಮವಹಿಸಿ ಅಭ್ಯಾಸ ಮಾಡಿ ಕಾಲೇಜಿಗೆ ಉತ್ತಮ ಫಲಿತಾಂಶ ತರಬೇಕೆಂದು ಕರೆ ನೀಡಿದರು.ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಈರೇಶ ಇಲ್ಲೂರು ಕಾರ್ಯಕ್ರಮ ಉದ್ಘಾಟಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.