ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಯಚೂರು: ನಗರದ ಹರಿಜನವಾಡಾ ಪ್ರದೇಶದಲ್ಲಿ ಈಚೆಗೆ ನವರತ್ನ ಯುವಕ ಸಂಘದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭ ಆಯೋಜಿಸಲಾಗಿತ್ತು.
ಹರಿಜನವಾಡದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಪಾಲಕರಲ್ಲಿ ಶೈಕ್ಷಣಿಕ ಪ್ರಜ್ಞೆ ಜಾಗೃತಗೊಂಡಿದ್ದು, ಮಕ್ಕಳನ್ನು ಶಾಲೆಗಳಿಗೆ ದಾಖಲಿಸುತ್ತಿರುವುದು ಒಳ್ಳೆ ಸಂಗತಿ ಎಂದರು.
ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲ ಪಾಲಕರೂ ಮುಂದಾಗಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಜತೆಗೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವಂತೆ ಸಲಹೆ ನೀಡಿದರು. ಜಿಪಂ ಮಾಜಿ ಸದಸ್ಯ ಬಷಿರುದ್ದೀನ್ ಮಾತನಾಡಿ, ಆಸ್ತಿ ಗಳಿಕೆಗಿಂತ ಶಿಕ್ಷಣ ಪಡೆಯುವತ್ತ ಎಲ್ಲರೂ ಗಮನಹರಿಸಬೇಕು. ಮುಂದಿನ ವರ್ಷ ಶೇ.80 ಕ್ಕಿಂತ ಹೆಚ್ಚು ಅಂಕ ಗಳಿಸಿದ ಎಲ್ಲ ಬಡಮಕ್ಕಳಿಗೆ ತಲಾ 5 ಸಾವಿರ ನೀಡುವುದಾಗಿ ಹೇಳಿದರು.
ನಗರಸಭೆ ಸದಸ್ಯರಾದ ಪವನ್ ಕುಮಾರ್, ಪಿ. ಯಲ್ಲಪ್ಪ, ಹೇಮಲತಾ ಬೂದೆಪ್ಪ ಮಾತನಾಡಿದರು. ರಾಯಚೂರು ವಿಕಾಸ ಪರಿಷತ್ನ ಅಧ್ಯಕ್ಷ ರವೀಂದ್ರ ಜಲ್ದಾರ್, ಜ್ಞಾನಗಂಗಾ ಶಾಲೆಯ ಪ್ರಾಚಾರ್ಯ ರಾಜ ಶ್ರೀನಿವಾಸ, ಅಂಬಣ್ಣ ಅರೋಲಿಕರ್ ಸೇರಿ ಅನೇಕರು ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ಎಪಿಎಂಸಿ ಮಾಜಿ ಅಧ್ಯಕ್ಷ ಆರ್. ತಿಮ್ಮಯ್ಯ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

