ಆಡಳಿತ ನಿರ್ಲಕ್ಷ್ಯ: ಕೆಸರು ಗದ್ದೆಯಂತಾದ ಯಲಗಲದಿನ್ನಿ
ಲಿಂಗಸ್ಗೂರು: ಪಟ್ಟಣಕ್ಕೆ ಸಮೀಪದ ಯಲಗಲದಿನ್ನಿ ಗ್ರಾಮದ ಅಭಿವೃದ್ಧಿಗೆ ಗ್ರಾಪಂ ನಿರ್ಲಕ್ಷ್ಯ ತೋರಿದ್ದು, ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಗಳು ಕಲುಷಿತ ನೀರು ಹರಿದು ಸಂಚಾರಕ್ಕೆ ಬಾರದಂತಾಗಿದೆ.
ಕಾಳಾಪುರ ಗ್ರಾಪಂ ವ್ಯಾಪ್ತಿಯ ಹಾಗೂ ಲಿಂಗಸ್ಗೂರು ಪಟ್ಟಣದಿಂದ ಕೂಗಳತೆ ದೂರದಲ್ಲಿರುವ ಯಲಗದಿನ್ನಿ ಗ್ರಾಮ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಇಲ್ಲಿನ ಜನರಿಗೆ ಸರ್ಕಾರ ಯೋಜನೆಗಳ ಕುರಿತು ಮಾಹಿತಿ ಇಲ್ಲದ ಪರಿಣಾಮ ಮೂಲಭೂತ ಸೌಲಭ್ಯ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ಹಲವಾರು ಯೋಜನೆಗಳು ಜಾರಿಗೆ ಬಂದಿದ್ದರೂ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಗ್ರಾಪಂ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದೆ.
ಅವ್ಯವಸ್ಥೆ: ಗ್ರಾಮದ ಪ್ರತಿ ಓಣಿಯಲ್ಲಿ ರಸ್ತೆ, ಚರಂಡಿ, ಶೌಚಾಲಯ ವ್ಯವಸ್ಥೆ ಇಲ್ಲದೆ ಜನರು ಪರದಾಡುವ ಪರಿಸ್ಥಿತಿ ಬಂದೊದಗಿದೆ. ಮನೆ ಬಳಕೆ ಮಾಡಿದ ಮಲೀನ ನೀರು ರಸ್ತೆ ಮೇಲೆ ಹರಿದು ಗ್ರಾಮಸ್ಥರ ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಮಹಿಳೆಯರು ಬಹಿರ್ದೆಸೆಗೆ ತೆರಳಲು ಸಂಜೆವರೆಗೆ ಕಾಯುವ ಪರಿಸ್ಥಿತಿ ಬಂದಿದೆ. ರಸ್ತೆ ಬದಿಗಳಲ್ಲಿ ಶೌಚವೇ ಗತಿಯಾಗಿದೆ. ಇದರಿಂದ ಇಲ್ಲಿನ ನಿಂತ ನೀರು, ವಾತಾವರಣ ಕಲುಷಿತಗೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಇಲ್ಲಿನ ಜನರಲ್ಲಿದೆ. ಗ್ರಾಮದಿಂದ ಗ್ರಾಪಂಗೆ ಆಯ್ಕೆಗೊಂಡ ಸದಸ್ಯರು ಮೂಲ ಸೌಕರ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂಬುದು ಗ್ರಾಮಸ್ಥರ ಆರೋಪವಾಗಿದೆ.
ನಿರ್ಲಕ್ಷ್ಯ: ನಿರ್ಮಲ ಭಾರತ ಅಭಿಯಾನ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶವಿದ್ದರೂ, ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ನೀಡುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಕೂಡಲೇ ಗ್ರಾಪಂ ಆಡಳಿತ ಎಚ್ಚೆತ್ತುಕೊಂಡು ಗ್ರಾಮದ ಜನರಿಗೆ ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಮೂಲಸೌಲಭ್ಯ ಕಲ್ಪಿಸುವತ್ತ ಗಮನ ಹರಿಸಬೇಕೆಂಬುದು ಗ್ರಾಮಸ್ಥರ ಒತ್ತಾಸೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

