ಸರ್ಕಾರಿ ವಸತಿ ನಿಲಯಗಳಿಗೆ ತಹಸೀಲ್ದಾರ್ ಭೇಟಿ
ಕ.ಪ್ರ. ವಾರ್ತೆ ಮುದಗಲ್ ಫೆ.16
ಪಟ್ಟಣದಲ್ಲಿರುವ ಬಿಸಿಎಂ ಇಲಾಖೆಗೆ ಸೇರಿರುವ ವಿದ್ಯಾರ್ಥಿಗಳ ನಿಲಯಗಳಿಗೆ ತಹಸೀಲ್ದಾರ್ ಮಹಾಜನ್ ದಿಢೀರ್ ಭೇಟಿ ನೀಡಿ ವಸತಿ ನಿಲಯಗಳಲ್ಲಿರುವ ಅವ್ಯವಸ್ಥೆ, ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಪಟ್ಟಣದ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ಬಿಸಿಎಂ ಇಲಾಖೆ ಕಾಲೇಜು ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಕೊಠಡಿಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ನೂರು ವಿದ್ಯಾರ್ಥಿಗಳ ಸಂಖ್ಯೆ ಇರುವ ಈ ವಸತಿ ನಿಲಯಕ್ಕೆ ಸ್ವಂತ ಕಟ್ಟಡವಿಲ್ಲ, ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ. ಬಯಲಲ್ಲೇ ಹೋಗಬೇಕು, ಕುಡಿಯುವ ನೀರು ಸಮರ್ಪಕವಾಗಿ ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ತಹಸೀಲ್ದಾರರಿಗೆ ದೂರಿದರು.
ಕಾಲೇಜು ಆರಂಭದಿಂದಲು ಖಾಸಗಿ ಕಟ್ಟಡದಲ್ಲೇ ನಡೆಸಲಾಗುತ್ತಿದೆ, ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗ ಸಿಕ್ಕಿಲ್ಲ ಎಂದು ವಸತಿ ನಿಲಯದ ಮೇಲ್ವಿಚಾರಕ ನಿಂಗಪ್ಪ ಅಧಿಕಾರಿಗೆ ತಿಳಿಸಿದರು. ಪಟ್ಟಣದ ಹೊರವಲಯದಲ್ಲಿರುವ ಸರ್ವೇ ನಂ 458ರಲ್ಲಿ ಕಾಲೇಜು ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಿಸಲು ಶಿಫಾರಸು ಮಾಡಲಾಗಿದೆ ಎಂದು ತಹಸೀಲ್ದಾರ ತಿಳಿಸಿದರು.
ವರದಿ ಸಲ್ಲಿಕೆಗೆ ಸೂಚನೆ: ಲೋಕಾಯುಕ್ತರ ಸೂಚನೆಯ ಮೇರೆಗೆ, ಜಿಲ್ಲಾಧಿಕಾರಿಗಳ ಆದೇಶದಂತೆ ತಾಲೂಕಿನ ವಿವಿಧ ಇಲಾಖೆಗಳ ವಸತಿ ನಿಲಯಗಳ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಹೇಳಿದ್ದರಿಂದ ವಸತಿ ನಿಲಯಗಳಿಗೆ ಭೇಟಿ ನೀಡಿರುವುದಾಗಿ ತಹಸೀಲ್ದಾರ ತಿಳಿಸಿದರು. ಮೆಟ್ರಿಕ್ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಶೌಚಾಲಯಗಳಿದ್ದರೂ, ನೀರಿನ ಅಭಾವದಿಂದಾಗಿ ಬಂದ್ ಮಾಡಿದ್ದಾರೆ. ಇಲ್ಲಿಯೂ ಕೊಠಡಿಗಳ ಕೊರತೆ ಇದು,್ದ ಇದರಿಂದ ಖಾಸಗಿ ಕಟ್ಟಡಗಳಲ್ಲಿ ಬಾಡಿಗೆ ಪಡೆಯಲಾಗಿದೆ. ಬೊರ್ವೆಲ್ ಇದ್ದರೂ ಬಂದ್ ಆಗಿವೆ. ಇಲ್ಲಿನ ಸಿಬ್ಬಂದಿಗೆ ನಾಲ್ಕು ತಿಂಗಳಿಂದ ಸಂಬಳ ಇಲ್ಲ ಎನ್ನುವ ಬಗ್ಗೆ ಮಾಹಿತಿ ಪಡೆದರು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯ ಖಾಸಗಿ ಕಟ್ಟಡದಲ್ಲಿದ್ದು, ಸ್ವಂತ ಕಟ್ಟಡ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ರಾತ್ರಿ ಕಾವಲುಗಾರರಿಲ್ಲ.
ಮುಖ್ಯರಸ್ತೆಯಲ್ಲಿರುವುದರಿಂದ ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವ ಮಾಹಿತಿಯನ್ನು ತಹಸೀಲ್ದಾರ ಮಹಾಜನ್ ಪಡೆದರು. ವಸತಿ ನಿಲಯಗಳ ವಸ್ತುಸ್ಥಿತಿ ಬಗ್ಗೆ ಡಿಸಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

