ವಿದ್ಯಾರ್ಥಿ ವಿರೋಧಿ ನೀತಿಗೆ ಎಸ್‌ಎಫ್‌ಐ ಸಿಡಿಮಿಡಿ
ಕ.ಪ್ರ. ವಾರ್ತೆ, ಲಿಂಗಸ್ಗೂರು, ಫೆ.20
ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕು ಕಿತ್ತುಕೊಳ್ಳುತ್ತಿರುವ ಸರ್ಕಾರದ ಅಪಾಯಕಾರಿ ಆದೇಶ ಕೈಬಿಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಪೆಡರೇಷನ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಖಾಜಾ ಹುಸೇನ್‌ರಿಗೆ ಮನವಿ ಸಲ್ಲಿಸಲಾಯಿತು.
ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯತಿ ನೀಡಬೇಕಿದ್ದ ಸರ್ಕಾರ ಪೂರ್ಣ ಶುಲ್ಕ ಕಟ್ಟುವಂತೆ ಸುತ್ತೋಲೆ ಹೊರಡಿಸಿದ್ದು, ಶುಲ್ಕ ಮರುಪಾವತಿ ಸೌಲಭ್ಯ ಪಡೆಯಲು ಅಂಕ ಮಾನದಂಡ ಮಾಡಿರುವುದು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ.
ಶಿಕ್ಷಣದಿಂದ ವಂಚಿತ: ಮೆಟ್ರಿಕ್ ನಂತರದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೋಧನೆ, ಪ್ರಯೋಗಾಲಯ, ಪರೀಕ್ಷೆ, ಕ್ರೀಡೆ, ಗ್ರಂಥಾಲಯ ಶುಲ್ಕಗಳು ವಿನಾಯತಿಗೆ ವಿದ್ಯಾರ್ಥಿಗಳು ನೀಡುವ ಶುಲ್ಕಗಳಿಗೆ ವಿನಾಯತಿ ನೀಡಲು ಸರ್ಕಾರ ಅಳವಡಿಸಿರುವ ನಿಯಮ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ವಿನಾಯತಿ ಸೌಲಭ್ಯ ಪಡೆಯಲು ವಿದ್ಯಾರ್ಥಿಯು ವಾರ್ಷಿಕ ಪರೀಕ್ಷೆಯಲ್ಲಿ ಪ್ರವರ್ಗ-1 ಶೇ.40, ಪ್ರವರ್ಗ-2ಎ, 3ಎ, 3ಬಿ ಶೇ.50ರಷ್ಟು ಅಂಕ ಪಡೆದಿರಬೇಕು. ನವೀಕರಣ ವಿದ್ಯಾರ್ಥಿಗಳು ಶೇ.60ರಿಂದ 70ರಷ್ಟು ಅಂಕ ಪಡೆದಿರಬೇಕೆಂಬ ನಿಯಮ ಮಾಡಿರುವುದು ಸಂವಿಧಾನ ವಿರೋಧಿಯಾಗಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಶುಲ್ಕ ವಿನಾಯತಿ ಕೋರಿ ಅರ್ಜಿ ಹಾಕಿದ ವಿದ್ಯಾರ್ಥಿಗಳು ಅಂಕಗಳ ಆಧಾರದ ಮೇಲೆ ಜಾರಿ ಮಾಡಿದರೆ ಅನ್ಯಾಯವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಪಾಯಕಾರಿ ಯೋಜನೆ ಕೈಬಿಡಿ: ಕೂಡಲೇ ಸರ್ಕಾರ ಇಂತಹ ಅಪಾಯಕಾರಿ ಯೋಜನೆ ಕೈಬಿಟ್ಟು ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಾಪಾಡಲು ಮುಂದಾಬೇಕು. ವಿದ್ಯಾರ್ಥಿಗಳ ಹಂತದ ಶುಲ್ಕಗಳಿಗೆ ವಿನಾಯತಿ ನೀಡಿ ಮೂಲ ಸೌಲಭ್ಯ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ವೇಳೆ ಎಸ್‌ಎಫ್‌ಐನ ಮಹೇಶ ರಾಠೋಡ, ರಮೇಶ ವೀರಾಪುರ, ಅಯ್ಯಣ್ಣ ಪಾಮನಕಲ್ಲೂರ, ನಾಗರಾಜ, ರಾಜು, ವಿನೋದ ಕುಮಾರ, ಶಶಿಕುಮಾರ, ವೀರೇಶ, ಶಿವಕುಮಾರ, ಅಮರೇಗೌಡ, ಬಸವರಾಜ, ಲಕ್ಕಪ್ಪ, ಚಂದ್ರಶೇಖರ ಸೇರಿದಂತೆ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

