ರಾಯಚೂರು

ಖರೀದಿ ಕೇಂದ್ರ ಆರಂಭಕ್ಕೆ ಸಚಿವರಿಗೆ ಮನವಿ

Published On :

ರಾಯಚೂರು: ರಾಜ್ಯ ಸರ್ಕಾರ ಕಡಲೆ ಮತ್ತು ಶೇಂಗಾ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಿ ಆದೇಶಿಸಿದ್ದರೂ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಆರಂಭಿಸದಿರುವ ಬಗ್ಗೆ ರಾಜ್ಯ ರೈತ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
ಈ ಕುರಿತು ಶನಿವಾರ ನಗರದಲ್ಲಿ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರ ಕಡಲೆ ಮತ್ತು ಶೇಂಗಾ ಖರೀದಿ ಕೇಂದ್ರ ಆರಂಭಕ್ಕೆ ಸೂಚಿಸಿದ್ದರೂ ಜಿಲ್ಲೆಯಲ್ಲಿ ಇದುವರೆಗೆ ಖರೀದಿ ಕೇಂದ್ರ ಆರಂಭಗೊಂಡಿಲ್ಲ. ತೊಗರಿ ಖರೀದಿ ಕೇಂದ್ರದಲ್ಲಿಯೂ ತೂಕದ ಯಂತ್ರದ ಕೊರತೆಯಿದ್ದು ಖರೀದಿ ವಿಳಂಬವಾಗುತ್ತಿದೆ ಎಂದು ದೂರಿದರು.
ಬೆಂಬೆಲೆಗೆ ಟೊಮೆಟೋ ಖರೀದಿಸಿ: ಕಾರಣ ಕೂಡಲೇ ಕಡಲೆ, ಶೇಂಗಾ ಖರೀದಿ ಕೇಂದ್ರವನ್ನು ಜಿಲ್ಲೆಯಲ್ಲಿ ಆರಂಭಿಸುವ ನಿಟ್ಟಿನಲ್ಲಿ ಕೂಡಲೇ ಅಧಿಕಾರಿಗಳಿಗೆ ಸೂಚಿಸಬೇಕು. ತೊಗರಿ ಖರೀದಿ ಕೇಂದ್ರದಲ್ಲಿ ಎರಡು ತೂಕದ ಯಂತ್ರಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿ ಟೊಮೆಟೋ ದರ ಕುಸಿತ ಕಂಡಿದ್ದು ಅದರಿಂದ ಟೊಮೆಟೋ ಬೆಳೆಗಾರರು ಕಂಗಾಲಾಗಿದ್ದಾರೆ. ರೈತರಿಗೆ ಟೊಮೆಟೋ ಖರೀದಿಗೆ ಬೆಂಬಲ ಬೆಲೆ ಪ್ರಕಟಿಸಿ ಖರೀದಿಸುವಂತೆ ಒತ್ತಾಯಿಸಿದರು.
ಟೊಮೆಟೋ ಬೆಳೆಗಾರರು ಪ್ರತಿ ವರ್ಷ ಅನುಭವಿಸುತ್ತಿರುವ ಸಂಕಷ್ಟ ತಪ್ಪಿಸುವ ನಿಟ್ಟಿನಲ್ಲಿ ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿರುವ ಜ್ಯೂಸ್ ತಯಾರಿಕೆ ಕಂಪನಿಯ ಮಾದರಿಯ ಘಟಕವನ್ನು ರಾಜ್ಯದಲ್ಲಿ ಸ್ಥಾಪಿಸಬೇಕೆಂದು ಆಗ್ರಹಿಸಿದ ರೈತ ಸಂಘದ ಪದಾಧಿಕಾರಿಗಳು ಕೂಡಲೇ ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭ ರಾಜ್ಯ ರೈತ ಸಂಘದ ಪ್ರಮುಖರಾದ ಅಮರಣ್ಣ ಗುಡಿಹಾಳ, ಲಕ್ಷ್ಮಣಗೌಡ ಕಡಗಂದೊಡ್ಡಿ, ಈರನಗೌಡ, ದೊಡ್ಡಬಸನಗೌಡ ಬಲ್ಲಟಗಿ, ನರಸಿಂಹರಾವ್ ಕುಲಕರ್ಣಿ, ಜಯಪ್ಪ ಸ್ವಾಮಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.