ಸ್ವಚ್ಛತೆಗೆ ಆದ್ಯತೆಯಿರಲಿ
ಕನ್ನಡಪ್ರಭವಾರ್ತೆ ರಾಯಚೂರು ಫೆ.23
ನಗರದ 15ನೇ ವಾರ್ಡನ 15ರ ನೇತಾಜಿ ನಗರದ ಅಂಗನವಾಡಿ ಕೇಂದ್ರದಲ್ಲಿ 24/7 ನಿರಂತರ ನೀರು ಸರಬರಾಜಿನ ಮಹತ್ವದ ಕುರಿತು ವಾರ್ಡ್ ಮಟ್ಟದಲ್ಲಿ ತಿಳಿವಳಿಕಾ ಕಾರ್ಯಕ್ರಮ ಜರುಗಿತು.
ಏಷ್ಯಾ ಅಭಿವೃದ್ಧಿ ಬ್ಯಾಂಕ್ ನೆರವಿನ ಉತ್ತರ ಕರ್ನಾಟಕ ನಗರವಲಯ ಬಂಡವಾಳ ಹೂಡಿಕಾ ಕಾರ್ಯಕ್ರಮದ ಸಮುದಾಯ ಅಭಿವೃದ್ಧಿ ವಿಭಾಗದ ಅನುಷ್ಠಾನ ಸಂಸ್ಥೆಯ ವಿಶ್ವ ಸೇವಾ ಮಿಷನ್, ರಾಯಚೂರು ಮತ್ತು ನಗರಸಭೆ ಸಂಯುಕ್ತಾಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಎನ್ಕೆಯುಎಸ್ಐಪಿ ಯೋಜನೆ ಯೋಜನಾಧಿಕಾರಿ ದಯಾನಂದ ಕುಮಾರ, ನಗರದಲ್ಲಿ ಏಷ್ಯಾ ಅಭಿವೃದ್ಧಿ ಬ್ಯಾಂಕ್ ನೆರವಿನ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕಾ ಕಾರ್ಯಕ್ರಮ ಅಡಿಯಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಭಾಗವಾಗಿ ವಾರ್ಡ್ ಮಟ್ಟದಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಬಳಕೆ ಮಹತ್ವದ ಕುರಿತು ಮಾಹಿತಿ ನೀಡಿದರು.
ಅಭಿವೃದ್ಧಿ ಕಾರ್ಯಕ್ರಮ: ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಮಪ್ಪ, ನಗರದಲ್ಲಿ ಪ್ರಸ್ತುತ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮಗಳು ಹಾಗೂ ಅವುಗಳ ಪ್ರಗತಿಯ ಬಗ್ಗೆ ತಿಳಿಸುತ್ತಾ ಸರ್ಕಾರೇತರ ಸಂಸ್ಥೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಭಾಗವಾಗಿ ವಾರ್ಡ್ ಮಟ್ಟದಲ್ಲಿ ಕುಡಿವ ನೀರು, ಒಳಚರಂಡಿ, ಬಳಕೆ ಕುರಿತು ಮಾಹಿತಿ ನೀಡಿದರು. ಇಂತಹ ಕಾರ್ಯಕ್ರಮಗಳ ಮೂಲಕ ಸಮುದಾಯವನ್ನು ನಗರದ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರು, ವಾರ್ಡ್ನ ಮುಖಂಡರು, ವಿಶ್ವ ಸೇವಾ ಮಿಷನ್ ಯೋಜನಾಧಿಕಾರಿಗಳು, ಎನ್ಕೆಯುಎಸ್ಐಪಿ ಯೋಜನೆ ಸಿಬ್ಬಂದಿ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಾರ್ಡ್ನ ನಿವಾಸಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

