ರಾಯಚೂರು

ಗುಣಮಟ್ಟದ ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಿ: ಶಾಸಕ

Published On :

ಸಿಂಧನೂರು: ನಗರದ ಕುಷ್ಟಗಿ ರಸ್ತೆಯ ಡಾ. ಅಂಬೇಡ್ಕರ್ ಕಾಲೇಜು ಬಾಲಕರ ವಸತಿ ನಿಲಯದಲ್ಲಿ 29ನೇ ವಾರ್ಷಿಕೋತ್ಸವ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಅದ್ಧೂರಿಯಾಗಿ ಬೀಳ್ಕೊಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಪೈಪೋಟಿ ಯುಗದಲ್ಲಿ ಸ್ಪರ್ಧೆಗೆ ಅಣಿಯಾಗುವುದು ಅನಿವಾರ್ಯ. ಶಿಕ್ಷಣಕ್ಕಾಗಿ ಕೇಂದ್ರ- ರಾಜ್ಯ ಸರ್ಕಾರಗಳನ್ನು ಹೆಚ್ಚಿನ ಅನುದಾನ ನೀಡುತ್ತಿವೆ. ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದೆ ಎಂದರು.
ಕಠಿಣ ಪರಿಶ್ರಮ, ಸಮಯಪ್ರಜ್ಞೆ, ಶಿಸ್ತು ಬೆಳೆಸಿಕೊಳ್ಳಬೇಕಿದೆ. ಇತ್ತೀಚೆಗೆ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಿ, ತತ್ವ ಸಿದ್ಧಾಂತಗಳೊಂದಿಗೆ ಜೀವನ ನಡೆಸಬೇಕಿದೆ. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಸಂಸ್ಕೃತಿ ಪರಂಪರೆ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಮಾಜ ಕಲ್ಯಾಣಾಧಿಕಾರಿ ಎನ್.ಅನುಸೂಯ ದೇವಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಸಿ.ಎಚ್. ನಾರಿನಾಳ, ಶಿಕ್ಷಕ ವೆಂಕನಗೌಡ ವಟಗಲ್, ಹಾಸ್ಯ ಕಲಾವಿದ ನಾಗೇಶ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಪಂ ಅಧ್ಯಕ್ಷೆ ಬಸಮ್ಮ ಕೊಟ್ರಪ್ಪ, ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ನಗರಸಭಾ ಸದಸ್ಯ ಶೇಖರಪ್ಪ ಗಿಣಿವಾರ, ರೈತ ಮುಖಂಡ ಎಚ್.ಎನ್. ಬಡಿಗೇರ್, ವೀರಭದ್ರಪ್ಪ ಅಮರಾಪುರ, ಗೋವಿಂದರಾಜ್ ಬಾರಕೇರ್, ವಿವಿಧ ವಸತಿ ನಿಲಯಗಳ ಮೇಲ್ವಿಚಾರಕರು ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.