ರಾಯಚೂರು

ಆರೋಗ್ಯ ಇಲಾಖೆಗೆ 43 ಲಕ್ಷ ಅನುದಾನ

Published On :

ಸಿಂಧನೂರು: ಹೈದ್ರಾಬಾದ್ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯಿಂದ ತಾಲೂಕಿಗೆ 3.56 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ 43 ಲಕ್ಷ ವೆಚ್ಚದಲ್ಲಿ ಹೈಟೆಕ್ ಲ್ಯಾಬರೋಟರಿ, ವೆಂಟಿಲೇಟರ್ ಆ್ಯಂಬುಲೆನ್ಸ್ ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರ ಬಡ ಜನರ ಆರೋಗ್ಯಕ್ಕಾಗಿ ಸಾಕಷ್ಟು ಯೋಜನೆ ರೂಪಿಸುತ್ತಿದೆ.
 ವೈದ್ಯರ ಕೊರತೆ ಇಡೀ ರಾಜ್ಯದ ಸಮಸ್ಯೆಯಾಗಿದ್ದು, ವೈದ್ಯಕೀಯ ಶಿಕ್ಷಣ ಕಾನೂನಿಗೆ ತಿದ್ದುಪತಿ ತರುವ ಪ್ರಯತ್ನಗಳು ನಡೆದಿವೆ. ಎಂಬಿಬಿಎಸ್ ಮುಗಿಸಿ ಒಂದು ವರ್ಷ ಗ್ರಾಮೀಣ ಸೇವೆ ಸಲ್ಲಿಸಿದರೆ ಮಾತ್ರ ಹೆಚ್ಚಿನ ಶಿಕ್ಷಣಕ್ಕೆ ಆದ್ಯತೆ ನೀಡಬೇಕೆನ್ನುವ ಚಿಂತನೆ ನಡೆದಿದೆ ಎಂದರು.
78,022 ಮಕ್ಕಳಿಗೆ ಲಸಿಕೆ ಹಾಕುವ ಗುರಿ: ತಾಲೂಕಿನ 78,022 ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕುವ ಗುರಿ ಹೊಂದಲಾಗಿದೆ. 50 ಕೇಂದ್ರಗಳು, 270 ತಂಡಗಳನ್ನು ರಚಿಸಲಾಗಿದೆ. ಸಾರ್ವಜನಿಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ನಗರಸಭಾ ಅಧ್ಯಕ್ಷ ಜಾಫರ ಜಾಹಗೀರದಾರ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕರವೀರಪ್ರಭು ಕ್ಯಾಲಕೊಂಡ, ತಾಪಂ ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ನಗರಸಭಾ ಸದಸ್ಯ ಪ್ರಭುರಾಜ, ತಾಪಂ ಎಡಿಎ ಶಿವಪ್ಪ ಸುಬೇದಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಎನ್.ಬಿ. ಕರಂಡಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ  ಈಶ್ವರ ದಾಸಪ್ಪನವರ ಸೇರಿದಂತೆ ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.