ನಗರಸಭೆ ಕಾರ್ಯಾಚರಣೆ, ಪ್ಲಾಸ್ಟಿಕ್ ಸಾಮಗ್ರಿ ವಶ
ರಾಯಚೂರು: ನಗರದ ಸರಾಫ್ ಬಜಾರ್ನಲ್ಲಿ ಸೋಮವಾರ ಬೆಳಗ್ಗೆ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಕ್ಷಕ್ಕೂ ಅಧಿಕ ಮೊತ್ತದ ವಿವಿಧ ಪ್ಲಾಸ್ಟಿಕ್ ಸಾಮಗ್ರಿ ಜಪ್ತಿ ಮಾಡಲಾಗಿದೆ.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನರಸಪ್ಪ ಯಕ್ಲಾಸಪುರ, ಹಿರಿಯ ಸದಸ್ಯ ಜಯಣ್ಣ ಮತ್ತು ನಗರಸಭೆಯ ಅಧಿಕಾರಿಗಳು ನಗರದ ಸರಾಫ್ ಬಜಾರ್ನ ಪ್ಲಾಸ್ಟಿಕ್ ಸಾಮಗ್ರಿ ಮಾರಾಟ ಮಳಿಗೆಯ ಮೇಲೆ ದಾಳಿ ಮಾಡಿ ಮಳಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷ ರು.ಗೂ ಅಧಿಕ ಮೊತ್ತದ ಪ್ಲಾಸ್ಟಿಕ್ ಚೀಲ ಮತ್ತಿತರೆ ಸಾಮಗ್ರಿ ವಶಕ್ಕೆ ಪಡೆದರು.
ತಾಲೂಕಿನ ಮಲಿಯಾಬಾದ್ನ ಗೋಶಾಲೆಯಲ್ಲಿ ಕೂಡಿ ಹಾಕಲಾಗಿದ್ದ ಬಿಡಾಡಿ ದನಗಳು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದವು. ಗೋವುಗಳ ಮರಣೋತ್ತರ ಪರೀಕ್ಷೆ ವೇಳೆ ಅವುಗಳು ಪ್ಲಾಸ್ಟಿಕ್ ಸೇವನೆಯಿಂದಲೇ ಸಾವನ್ನಪ್ಪಿದ್ದು ದೃಢವಾಗಿತ್ತು.
ಈ ಹಿನ್ನೆಲೆಯಲ್ಲಿ ಆಗಿನಿಂದಲೇ ನಗರಸಭೆಯು ಅಧಿಕಾರಿಗಳು ಮತ್ತು ನಗರಸಭೆಯ ಸ್ಥಾಯಿ ಸಮಿತಿ ಪ್ರಮುಖರು ಪ್ಲಾಸ್ಟಿಕ್ ಮಾರಾಟ ಮಳಿಗೆಗಳ ಮೇಲೆ ದಾಳಿಗೆ ಮುಂದಾಗಿದ್ದಾರೆ. ಕಳೆದೊಂದು ತಿಂಗಳಿನಿಂದ ಆಗಾಗ್ಗೆ ಕಾರ್ಯಾಚರಣೆ ನಡೆಸಿರುವ ಸಿಬ್ಬಂದಿ ಸೋಮವಾರವೂ ದಾಳಿ ನಡೆಸಿದ ವೇಳೆ ಪ್ಲಾಸ್ಟಿಕ್ ಸಾಮಗ್ರಿ ಮಾರಾಟ ಮಳಿಗೆಯ ಮಾಲೀಕರೊಂದಿಗೆ ವಾಗ್ವಾದ ನಡೆಯಿತು. ನಗರದಲ್ಲಿ ಪ್ಲಾಸ್ಟಿಕ್ ಚೀಲಗಳ ಮಾರಾಟ ಮತ್ತು ಬಳಕೆ ನಿಷೇಧಿಸಿದ್ದರೂ ನಗರಸಭೆಯ ಆದೇಶ ಮೀರಿ ಮಾರಾಟಕ್ಕೆ ಸಂಗ್ರಹಿಸಿಟ್ಟಿದ್ದ ಸಾಮಗ್ರಿ ಜಪ್ತಿ ಮಾಡಲಾಯಿತು. ಈ ವೇಳೆ ನಗರಸಭೆಯ ಅಧಿಕಾರಿಗಳು, ಪೊಲೀಸರು ಹಾಗೂ ಸಿಬ್ಬಂದಿಯಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

