ದೇವದುರ್ಗ ಕನ್ನಡ ಸಾಹಿತ್ಯ ಸಮ್ಮೇಳನ; ಖೇಣದ್ ಅಧ್ಯಕ್ಷ
ದೇವದುರ್ಗ: ದೇವದುರ್ಗ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 3ರಂದು ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಶಿಕ್ಷಣ ಪ್ರೇಮಿ, ಕಸಾಪ ಮಾಜಿ ಅಧ್ಯಕ್ಷ ಮುರಿಗೆಪ್ಪ ಸಾಹು ಖೇಣದ್ ಆಯ್ಕೆಯಾಗಿದ್ದಾರೆಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ನರಸಿಂಗರಾವ್ ಸರ್ಕೀಲ್ ತಿಳಿಸಿದರು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುರಿಗೆಪ್ಪ ಸಾಹು ಅವರು ಮೂರು ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಸಾಹಿತ್ಯ, ಕನ್ನಡ ಭಾಷೆಗಾಗಿ ಅಪಾರ ಶ್ರಮವಹಿಸಿದ್ದಾರೆ. ಅವರ ಕನ್ನಡ ಸೇವೆ ಗುರುತಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಈ ಮೊದಲು ತಾಲೂಕು ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಜಿಪಂ ಉಪ ಚುನಾವಣೆ ಹಿನ್ನೆಲೆ ಚುನಾವಣೆ ನೀತಿ ಸಹಿಂತೆ ಜಾರಿಯಲ್ಲಿರುವುದರಿಂದ ಪಟ್ಟಣದ ಬಾಲಕರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಾ.3ರಂದು ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದರು. ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಶಾಸಕ ವೆಂಕಟೇಶ ನಾಯಕ ಅವರು ನೇತೃತ್ವ ವಹಿಸಿಕೊಂಡಿದ್ದಾರೆ ಎಂದು ವಿವರಿಸಿದರು.
ಈ ಸಂದರ್ಭ ಕಸಾಪ ಜಿಲ್ಲಾ ಕಾರ್ಯದರ್ಶಿ ರಂಗಣ್ಣ ಪಾಟೀಲ್ ಅಳ್ಳುಂಡಿ, ತಾಲೂಕು ಕಸಾಪ ಪದಾಧಿಕಾರಿಗಳಾದ ಶಿವರಾಜ್ ಅಕ್ಕಿಕಲ್, ಕಸಾಪ ಮಾಜಿ ಅಧ್ಯಕ್ಷ ದಂಡಪ್ಪ, ಬಸವರಾಜ ಶಿಕ್ಷಕರು, ಬಸವರಾಜ ಮಡಿವಾಳ, ಭೀಮೋಜಿರಾವ್ ಜಗತಾಪ್, ಬಸವರಾಜ ಪಾಟೀಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

