ನೇಮಕಾತಿ ಅಧಿಸೂಚನೆಯಿಂದ ಹೈ.ಕ. ಆರು ಜಿಲ್ಲೆಗಳು ವಂಚಿತ
ಕ.ಪ್ರ. ವಾರ್ತೆ, ರಾಯಚೂರು, ಫೆ.26
ರಾಜ್ಯ ಪೋಲಿಸ್ ಇಲಾಖೆಯಲ್ಲಿ ಖಾಲಿಯಿರುವ ಸಿವಿಲ್ ಹಾಗೂ ಮಹಿಳಾ ಪೋಲಿಸ್ ಕಾನ್ಸಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಹೈದ್ರಾಬಾದ್ ಕರ್ನಾಟಕದ 6 ಜಿಲ್ಲೆಗಳನ್ನು ಕೈಬಿಟ್ಟಿರುವ ಬಗ್ಗೆ ಹೈ.ಕ. ಹೋರಾಟ ಸಮಿತಿ ಆಕ್ಷೇಪಿಸಿದೆ.
ಈ ಕುರಿತು ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ. ರಜಾಕ್ ಉಸ್ತಾದ್ ಅವರು ಡಿಐಜಿ ಅವರಿಗೆ ದೂರು ಸಲ್ಲಿಸಿ, ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ನೀಡಿರುವ ವಿಶೇಷ ಸ್ಥಾನಮಾನದಡಿ ಮೀಸಲಾತಿ ಕಲ್ಪಿಸಿದ್ದರೂ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಸಿವಿಲ್ ಹಾಗೂ ಮಹಿಳಾ ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆಯಲ್ಲಿ ಹೈ-ಕ ಜಿಲ್ಲೆಗಳ ಹೆಸರನ್ನು ಕೈಬಿಡಲಾಗಿದೆ ಎಂದು ಆರೋಪಿಸಿದರು.
ಹೈ-ಕ ಜಿಲ್ಲೆಗಳ ಸೇರ್ಪಡೆಯಿಲ್ಲ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಖಾಲಿಯಿರುವ ಸಿವಿಲ್ ಹಾಗೂ ಮಹಿಳಾ ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಅವಕಾಶ ನೀಡಲಾಗಿದೆ. ಆದರೆ ಹೈ.ಕ.ದ ಯಾವ ಜಿಲ್ಲೆಯ ಹೆಸರೂ ನೇಮಕಾತಿ ಪ್ರಕ್ರಿಯೆಯಲ್ಲಿ ಸೇರ್ಪಡೆಗೊಂಡಿಲ್ಲ ಎಂದು ದೂರಿದ್ದಾರೆ.
ಇದರಿಂದ ಬಹು ದಿನಗಳಿಂದ ಪೊಲೀಸ್ ಹುದ್ದೆ ಆಕಾಂಕ್ಷೆಯಲ್ಲಿರುವವರು ಆತಂಕಕ್ಕೆ ಸಿಲುಕುವಂತಾಗಿದೆ. ಈ ಅಧಿಸೂಚನೆ ಮೂಲಕ ಪೊಲೀಸ್ ಇಲಾಖೆ ಸಂವಿಧಾನದ 371(ಜೆ)ನೇ ಕಲಂನಡಿ ಕಾನೂನು ಜಾರಿಯಾಗಿದ್ದರೂ ಪಾಲನೆ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೂತನ ಅಧಿಸೂಚನೆಗೆ ಒತ್ತಾಯ: ಈಗಾಗಲೇ ಹಲವಾರು ಇಲಾಖೆಯಲ್ಲಿ ಕಾನೂನು ಪ್ರಕಾರ ಮೀಸಲಾತಿ ನಿಗದಿಗೊಳಿಸಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ಅರ್ಹತಾ ಪ್ರಮಾಣ ಪತ್ರವನ್ನೂ ವಿತರಿಸಲಾಗುತ್ತಿದೆ. ಆದ್ದರಿಂದ, ಹೈದ್ರಾಬಾದ್ ಕರ್ನಾಟಕಕ್ಕಾಗಿ ಪ್ರತ್ಯೇಕ ಅಧಿಸೂಚನೆ ಹೊರಡಿಸುವ ಅವಶ್ಯಕತೆಯಿಲ್ಲ. ಈಗಾಗಲೇ ಹೊರಡಿಸಿದ ಸಿವಿಲ್ ಹಾಗೂ ಮಹಿಳಾ ಪೋಲಿಸ್ ಕಾನ್ಸಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ವಾಪಸು ಪಡೆದು ಹೈ.ಕ. ಎಲ್ಲ ಜಿಲ್ಲೆಗಳ ಖಾಲಿ ಹುದ್ದೆಗಳ ವಿವರವನ್ನು ಅದರಲ್ಲಿ ಸೇರಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

