ರಾಯಚೂರು

ಸಮರ್ಪಕ ನೀರಿಗಾಗಿ ಉಗ್ರ ಹೋರಾಟ...

Published On :

ದೇವದುರ್ಗ: ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಮಾ.31ರವರೆಗೆ ಸಮರ್ಪಕ ನೀರು ಹರಿಸುವಂತೆ ಒತ್ತಾಯಿಸಿ ಪಟ್ಟಣದಲ್ಲಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಧರಣಿ ನಡೆಸಿದರು.
ಪಟ್ಟಣದ ಮಿನಿ ವಿಧಾನಸೌಧದ ಎದುರು ಧರಣಿ ನಡೆಸಿದ ಕಾರ್ಯಕರ್ತರು, ನಾರಾಯಣಪುರ ಬಲದಂಡೆ ಹಾಗೂ ಎಡದಂಡೆ ಕಾಲುವೆ ಹಾಗೂ ರಾಂಪೂರ ಏತ ನೀರಾವರಿಯಿಂದ ನೀರಾವರಿಗೆ ಒಳಪಟ್ಟಿರುವ ಜಮೀನುಗಳಲ್ಲಿ ರೈತರು ಬೆಳೆದಿರುವ ವಿವಿಧ ಬೆಳೆಗಳಿಗೆ ಮಾ.31ರ ವರೆಗೆ ನೀರಿನ ಅವಶ್ಯಕತೆಯಿದೆ ಎಂದು ತಿಳಿಸಿದರು.
ನೀರಾವರಿ ಸಲಹಾ ಸಮಿತಿಯಲ್ಲಿ ಮಾ.10ರವರೆಗೆ ನೀರೊದಗಿಸಲಾಗುತ್ತದೆ ಎಂದು ನಿರ್ಧರಿಸಿದ್ದು, ಹಾಗೆಯೇ ನೀರಿನ ಹರಿವು ನಿಲುಗಡೆ ಮಾಡಿದಲ್ಲಿ ರೈತರಿಗೆ ಸಾವಿರಾರು ಕೋಟಿ ರು. ಬೆಳೆ ಹಾನಿಯಾಗಲಿದೆ. ಈಗಾಗಲೇ ರೈತರು ತಮ್ಮ ಬೆಳೆಗಳಿಗೆ ಕ್ರಿಮಿನಾಶಕ, ರಸಗೊಬ್ಬರ, ಸೇರಿ ವಿವಿಧ ವೆಚ್ಚಗಳಾಗಿ ಲಕ್ಷಾಂತರ ರು. ವೆಚ್ಚ ಮಾಡಿದ್ದಾರೆ. ಕಾಲುವೆಗಳಿಗೆ ನೀರಿನ ಹರಿವು ನಿಲ್ಲಿಸುವುದರಿಂದ ಭಾರೀ ನಷ್ಟಕ್ಕೆ ರೈತರು ಸಿಲುಕುವಂತಾಗುತ್ತದೆ ಎಂದು ಆರೋಪಿಸಿದರು.
ಉಗ್ರ ಹೋರಾಟದ ಎಚ್ಚರಿಕೆ: ರಾಜ್ಯ ಸರ್ಕಾರ ಕೂಡಲೇ ಈ ನಿಟ್ಟಿನಲ್ಲಿ ಕೂಡಲೇ ತನ್ನ ನಿರ್ಧಾರ ಪ್ರಕಟಿಸಿ ರೈತರಿಗೆ ಅನುಕೂಲ ಕಲ್ಪಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಎಚ್ಚರಿಸಿದರು. ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ, ಯಾದಗಿರಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ, ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಂಡಗಂದೊಡ್ಡಿ, ಬೂದಯ್ಯ ಸ್ವಾಮಿ, ರಾಮನಗೌಡ ದೊಂಡಂಬಳಿ, ಚಿದಾನಂದ ಬಿ. ಗಣೇಕಲ್,  ನರಸಪ್ಪ ಯಾದವ್, ಕೆ.ವಿರೇಶಗೌಡ, ಭೀಮೇಶ್ವರ ರಾವ್ ಸೇರಿ ಅನೇಕ ರೈತರಿದ್ದರು.
ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ
ಸಿಂಧನೂರು ವರದಿ: ತುಂಗಭದ್ರಾ ಎಡದಂಡೆ ನಾಲೆಯ 55ನೇ ವಿತರಣೆ ಕಾಲುವೆಗೆ ಅನಧಿಕೃತವಾಗಿ ಹಾಕಿಕೊಂಡಿರುವ ಪೈಪುಗಳ ತೆರವಿಗೆ ಆಗ್ರಹಿಸಿ ಕರ್ನಾಟಕ ರೈತ ಸಂಘ, ಮತ್ತಿತರ ಸಂಘಟನೆಗಳು ಬುಧವಾರ ಪಿಡಬ್ಲ್ಯೂಡಿ ಕ್ಯಾಂಪ್ನಲ್ಲಿರುವ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಪ್ರತಿಭಟಿಸಿದವು. ಮೇಲ್ಭಾಗದಲ್ಲಿ ಅಕ್ರಮವಾಗಿ ನೀರು ಪಡೆಯುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕುಮಾರಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.
ಭರವಸೆ: ಈಗಾಗಲೇ 54ನೇ ವಿತರಣಾ ಕಾಲುವೆಯ ಅನಧಿಕೃತ ಪೈಪುಗಳನ್ನು ತೆಗೆದು ಹಾಕಲಾಗಿದ್ದು, ತಕ್ಷಣದಿಂದಲೇ 55ನೇ ಕಾಲುವೆಗೆ ಅಕ್ರಮವಾಗಿ ಪೈಪ್ ಹಾಕಿಕೊಂಡಿರುವ ವ್ಯಕ್ತಿಗಳ ವಿರುದ್ಧ ಕೆಳಭಾಗದ ರೈತರಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವುದಾಗಿ ಲಿಂಗಸ್ಗೂರು ಸಹಾಯಕ ಆಯುಕ್ತ ಟಿ.ಯೋಗೇಶ ಭರವಸೆ ನೀಡಿದರು. ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.