ರಾಯಚೂರು

ಕ್ಷುಲ್ಲಕ ಕಾರಣ; ಗುಂಪುಗಳ ಮಾರಾಮಾರಿ, ಉದ್ವಿಗ್ನ

Published On :

ದೇವದುರ್ಗ: ತಾಲೂಕಿನ ಜಾಗೀರಜಾಡಲದಿನ್ನಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಎರಡು ಗುಂಪುಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಫೆ.27ರಂದು ಮಾರಾಮಾರಿ ನಡೆದಿದ್ದು, ಘಟನೆ ನಂತರ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿಯಿದೆ. ಪೊಲೀಸರು ಗ್ರಾಮದಲ್ಲಿ ಬಿಡಾರ ಹೂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಹೊಟೇಲ್ ಬಳಿ ಎರಡು ಕೋಮಿನ ಗುಂಪುಗಳ ಯುವಕರ ಮಧ್ಯೆ ಮಾರಾಮಾರಿ ನಡೆದಿದ್ದು, ಅದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ವೇಳೆ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕಾಗಿ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಗ್ರಾಮದಿಂದ ದಲಿತರನ್ನು ಹೊರಹಾಕಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಆರೋಪಿಸಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಗ್ರಾಮಕ್ಕೆ ಧಾವಿಸಿದ್ದು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.
ಆರೋಪ: ತಾಲೂಕಿನ ಕೊಪ್ಪರ ಮತ್ತು ಜಾಗೀರಜಾಡಲದಿನ್ನಿ ಗ್ರಾಮಗಳಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದಿದ್ದು ದಲಿತರಿಗೆ ಸೂಕ್ತ ರಕ್ಷಣೆ ನೀಡುವಂತೆ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.
ದೌರ್ಜನ್ಯದ ಪ್ರಕರಣದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಬೇಕು. ದಲಿತರಿಗೆ ಗ್ರಾಮಗಳಲ್ಲಿ ಸೂಕ್ತ ರಕ್ಷಣೆ ನೀಡಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಹನುಮಂತಪ್ಪ ಕಾಕರಗಲ್, ಶಿವರಾಯ ಅಕ್ಕರಕಿ, ಹನುಮಂತಪ್ಪ ಮನ್ನಾಪುರ, ಮಲ್ಲಿಕಾರ್ಜುನ ಜೊಂಡೆ, ಶಿವಪ್ಪ ಬಲ್ಲಿದವ್, ರಮೇಶ ರಾಮನಾಳ, ರಾಮಣ್ಣ ಕೊಪ್ಪರ, ಮಲ್ಲಪ್ಪ ಬೆಲ್ಲದವರು ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.