ಕರಕುಶಲ ವಸ್ತು ಪ್ರದರ್ಶನ
ಕ.ಪ್ರ. ವಾರ್ತೆ, ಸಿಂಧನೂರು, ಜ.1
ತಾಲೂಕಿನ ಅಂಬಾಮಠ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಟ್ಟದ ಕರಕುಶಲ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಾಸಕ ಬಾದರ್ಲಿ ಹಂಪನಗೌಡ ಮಾತನಾಡಿ, ಗ್ರಾಮದ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದು ಶೈಕ್ಷಣಿಕ ಸಾಧನೆಯಲ್ಲಿ ವಿದ್ಯಾರ್ಥಿಗಳು ಕೈ ಜೋಡಿಸಬೇಕು.
ಕಾರ್ಯಕ್ರಮ ಉದ್ಘಾಟಿಸಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಬಸಮ್ಮ ಕೊಟ್ರಪ್ಪ, ಕರಕುಶಲ ವಸ್ತುಗಳ ತಯಾರಿಕೆ ಉತ್ತಮ ಹವ್ಯಾಸವಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸೃಜಶೀಲತೆ ವೃದ್ಧಿಯಾಗಲಿದೆ. ಸಿದ್ಧ ವಸ್ತುಗಳ ಮೊರೆ ಹೋಗದೆ ಇಂತಹ ಕಲೆಯನ್ನು ಕಲಿತು ಮನೆಗೆ ಅವಶ್ಯವಾದ ಅಲಂಕಾರಿಕ ವಸ್ತುಗಳನ್ನು ತಾವೇ ತಯಾರಿಸಿಕೊಳ್ಳುವುದರಿಂದ ಮನಸ್ಸಿಗೆ ಹೆಚ್ಚು ಸಂತೋಷ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯಿತಿ ಸದಸ್ಯ ಚಂದುಸಾಬ ಮುಳ್ಳೂರು, ತಾಪಂ ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ಎಸ್ಡಿಎಂಸಿ ಉಪಾಧ್ಯಕ್ಷ ಲಕ್ಷ್ಮಿಪತಿ ಉಪಸ್ಥಿತರಿದ್ದರು. ಲಕ್ಷ್ಮೀಕಟ್ಟಿ ಮತ್ತು ಮುಮ್ತಾಜ್ ಬೇಗಂ ಪ್ರಾರ್ಥಿಸಿದರು. ನಾಗರಾಜ ಮತ್ತಿಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಿಕಾರ್ಜುನ ನಿರೂಪಿಸಿದರು. ನಾಗರಾಜ ಶ್ರೇಷ್ಠಿ ವಂದಿಸಿದರು.
ಇದೇ ಸಂದರ್ಭದಲ್ಲಿ ಶಿಕ್ಷಕಿ ಶೀಲಾ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳನ್ನು ಪ್ರದರ್ಶಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

