ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಗಮನ: ಸಿಇಒ
ಕ.ಪ್ರ. ವಾರ್ತೆ, ರಾಯಚೂರು, ಜ.1
ಶಿಕ್ಷಣ ಮತ್ತು ಆರೋಗ್ಯಕ್ಕೆ ವಿಶೇಷ ಗಮನ ನೀಡಿಕೆ. ಜಿಲ್ಲಾ ಪಂಚಾಯಿತಿ ಆಡಳಿತಕ್ಕೆ ಚುರುಕು ಮುಟ್ಟಿಸಿ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನೂತನ ಜಿಪಂ ಸಿಇಒ ವಿಜಯ ಜೋತ್ಸ್ನಾ ಹೇಳಿದರು.
ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರಿಂದ ಜಿಪಂ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದುಳಿದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದರೆ ವೃತ್ತಿಯಲ್ಲಿ ಹೆಚ್ಚಿನ ಅನುಭವ ದೊರೆಯುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ನಂತರ ಆಡಳಿತದ ಸಮಸ್ಯೆ ನಿವಾರಿಸಲಾಗುತ್ತದೆ ಎಂದು ಹೇಳಿದರು.
ಸಮಸ್ಯೆಗೆ ತಕ್ಷಣ ಸ್ಪಂದಿಸುವೆ: ಹೊಸ ವರ್ಷದ ಆರಂಭದಲ್ಲಿಯೇ ಸರ್ಕಾರ ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಸಾರ್ವಜನಿಕರಿಗೆ ಸಹಕಾರಿಯಾಗುವುದಾಗಿ ತಿಳಿಸಿದ ಅವರು, ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕವಿಟ್ಟುಕೊಳ್ಳುವ ಮೂಲಕ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು ಸಮಾಜದ ಪ್ರತಿಯೊಬ್ಬರಿಗೂ ದೊರೆಯಬೇಕೆಂಬ ಸರ್ಕಾರದ ಆಶಯಕ್ಕೆ ಪೂರಕವಾಗಿ ಹೆಚ್ಚಿನ ಗಮನಹರಿಸಲಾಗುತ್ತದೆ. ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಆಂಧ್ರ ಮೂಲದವರು: ಜಿಪಂ ನೂತನ ಸಿಇಒ ವಿಜಯ ಜೋತ್ಸ್ನಾ ಅವರು ಆಂಧ್ರದ ಗುಂಟೂರಿನವರು. ಎಂಬಿಎ ಪದವೀಧರೆ. 2009ರಲ್ಲಿ ಐಪಿಎಸ್, 2010ರಲ್ಲಿ ಐಎಎಸ್ ಪರೀಕ್ಷೆ ಪೂರ್ಣಗೊಳಿಸಿದರು. ಬೆಳಗಾವಿ ಮತ್ತು ಸೇಡಂನಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದು, ರಾಜ್ಯ ಸರ್ಕಾರ ಡಿ.31ರಂದು ಬಡ್ತಿ ನೀಡಿ ಜಿಪಂ ಸಿಇಒ ಆಗಿ ನೇಮಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

