ರಾಯಚೂರು

ಗಂಗಾ ಹಿರೇಮಠಗೆ ಪ್ರತಿಭಾ ಪ್ರೋತ್ಸಾಹ

Published On :

ಸಿಂಧನೂರು: ತಾಲೂಕಿನ ತುರ್ವಿಹಾಳ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಗಂಗಾ ಹಿರೇಮಠ ಸೌರ ವಿದ್ಯುತ್ ಬಳಕೆ ಕುರಿತ ವಿಜ್ಞಾನ ಮಾದರಿಗೆ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರು. 5 ಸಾವಿರ ಪ್ರತಿಭಾ ಪ್ರೋತ್ಸಾಹ ಧನ ನೀಡಿ ಗೌರವಿಸಿದೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಸುಧಾರಣಾ ಸಮಿತಿ, ಮುಖ್ಯಗುರು ಹನುಮಂತಪ್ಪಗೌಡ, ಶಿಕ್ಷಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ವಸತಿ ಶಾಲೆಗೆ ಶಾಸಕರ ಭೇಟಿ
ದೇವದುರ್ಗ: ಶೈಕ್ಷಣಿಕವಾಗಿ ಹಿಂದುಳಿದ ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಪೂರಕ ಪರಿಸರ ನಿರ್ಮಿಸುವಲ್ಲಿ ಅಧಿಕಾರಿಗಳು ಶ್ರಮಿಸಬೇಕೆಂದು ಶಾಸಕ ವೆಂಕಟೇಶ ನಾಯಕ ಸೂಚಿಸಿದರು. ಅವರು ಇತ್ತೀಚೆಗೆ ಜಾಲಹಳ್ಳಿ ಗ್ರಾಮದ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ನಂತರ ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಆದೇಶಿಸಿದರು.
ಪರೀಕ್ಷೆ; ನಿಷೇಧಾಜ್ಞೆ
ರಾಯಚೂರು: ಇಲ್ಲಿಗೆ ಸಮೀಪದ ಯರಮರಸ್ನ ಡಯಟ್ ಪರೀಕ್ಷಾ ಕೇಂದ್ರದಲ್ಲಿ ಜ.3ರಿಂದ 11ರವರೆಗೆ ನಡೆಯುವ ಡಿಇಡಿ ಪೂರಕ ಪರೀಕ್ಷೆಗಳ ಕೇಂದ್ರದಲ್ಲಿ ನಕಲು ಹಾಗೂ ಅವ್ಯವಹಾರ ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಆದೇಶ ಹೊರಡಿಸಿ, ಪರೀಕ್ಷಾ ಕೇಂದ್ರದ ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಅನ್ಯರು ನಿಷೇಧಿತ ಪ್ರದೇಶವನ್ನು ಪ್ರವೇಶಿಸುವಂತಿಲ್ಲ. ಪರೀಕ್ಷೆ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಸಹ ಆದೇಶಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.