ರಾಯಚೂರು

ವಾಲ್ಮೀಕಿ ಸಮುದಾಯಕ್ಕೆ ಶೇ.7.5ರ ಮೀಸಲಾತಿ ಬೇಡಿಕೆ

Published On :

ದೇವದುರ್ಗ/ಲಿಂಗಸ್ಗೂರು: ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸಬೇಕೆಂಬುದು ಸೇರಿ ವಿವಿಧ ಸೌಲಭ್ಯಗಳಿಗೆ ಆಗ್ರಹಿಸಿ ಜ.11ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಸಮಾಜದ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸುವುದಾಗಿ ಅಬಕಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದರಿದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜ.11ರಂದು ವಾಲ್ಮೀಕಿ ಸಮಾಜದ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ ಆಯೋಜಿಸಿದ್ದು, ವಾಲ್ಮೀಕಿ ಸಮಾಜದವರು ಪಾಲ್ಗೊಳ್ಳಲಿದ್ದಾರೆಂದರು.
ಸಮಾವೇಶದಲ್ಲಿ ಕನಿಷ್ಟ 2ಲಕ್ಷ ಜನ ಸೇರುವ ಸಾಧ್ಯತೆ ಇದೆ. ಈಗಾಗಲೇ ವಾಲ್ಮೀಕಿ ಸಮಾಜಕ್ಕೆ ಬೇರೆ ರಾಜ್ಯಗಳಲ್ಲಿ ನೀಡಿದಂತೆ ಕರ್ನಾಟಕದಲ್ಲಿ ಶೇ.7.5ರಷ್ಟು ಮೀಸಲಾತಿಯ ಅವಶ್ಯಕತೆಯಿದೆ. ರಾಜ್ಯದ ವಿವಿಧ ವಿವಿ ಗಳಿಗೆ ವಾಲ್ಮೀಕಿ ಸಮಾಜದವರನ್ನು ಕುಲಪತಿಗಳಾಗಿ ನೇಮಿಸಿ, ವಿವಿಧ 20 ಬೇಡಿಕೆಗಳ ಈಡೇರಿಕೆಗೆ ಸಮಾವೇಶದಲ್ಲಿ ಒತ್ತಾಯಿಸಲಾಗುತ್ತದೆ ಎಂದು ಹೇಳಿದರು.
ಸಿಎಂ ತಮಗೆ ನೀಡಿರುವ ಅಬಕಾರಿ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದು,  ಕಳ್ಳಭಟ್ಟಿ ಸೇರಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅಕ್ರಮ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದರು.
ಲೋಕಸಭಾ ಚುನಾವಣೆ ಅಂಗವಾಗಿ ಸ್ಥಳೀಯರಿಗೆ ಮತ್ತು ಗೆಲ್ಲುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಸ್ಪರ್ಧೆಗೆ ಅವಕಾಶ ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ವೆಂಕಟೇಶ ನಾಯಕ, ಪಕ್ಷದ ಪ್ರಮುಖರಾದ ಬಸವರಾಜ ಪಾಟೀಲ್ ಇಟಗಿ, ಬಿ.ವಿ. ನಾಯಕ, ಭೀಮನಗೌಡ ನಾಗಡದಿನ್ನಿ, ಬಸ್ಸಯ್ಯ ಶಾಖೆ, ಎಸ್ಟಿ ಘಟಕದ ರಾಜ್ಯ ಮುಖಂಡ ವೇಣುಗೋಪಾಲಗೌಡ, ಮಲ್ಲಿಕಾರ್ಜುನ ಪಾಟೀಲ್, ಅಕ್ಕಮಹಾದೇವಿ ಆರ್. ಪಾಟೀಲ್, ಬಾಪೂಗೌಡ ಚಿಕ್ಕಹೊನ್ನಕುಣಿ, ಯಕ್ಬಾಲಸಾಬ್ ಹೌದುಡಿ, ರವಿಪಾಟೀಲ್ ರಾಯಚೂರು, ಪುರಸಭೆ ಮಾಜಿ ಅಧ್ಯಕ್ಷ ರಂಗಪ್ಪ ಗೋಸಲ್, ಎಸ್ಸಿ ಘಟಕದ ಅಧ್ಯಕ್ಷ ಚಂದ್ರಕಾಂತ್ ಬಿಲ್ಲವ್ ಸೇರಿ ಅನೇಕರಿದ್ದರು.
ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಭೂಪನಗೌಡ ಕರಡಕಲ್, ಮುನ್ವರ್ ಖಾನ್, ಮುಖಂಡರಾದ ಡಿ.ಎಸ್. ಹೂಲಗೇರಿ, ಲಾಲ್ ಅಹ್ಮದ್ ಸಾಬ, ಖಾದರಪಾಶಾ, ಗುಂಡಪ್ಪ ನಾಯಕ, ಬಸವಂತರಾಯ ಕುರಿ, ಎಚ್.ಬಿ. ಮುರಾರಿ, ಶಂಕರಗೌಡ ಬಳಗಾನೂರು, ಎಪಿಎಂಸಿ ಅಧ್ಯಕ್ಷ ಚನ್ನವೀರಪ್ಪಗೌಡ ಪಾಗಾದ, ಡಾ. ಅಯ್ಯಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.